HomeInternationalಐ ಲವ್ ಇಂಡಿಯಾ, ನಾನು ಮೋದಿ ಬಿಗ್ ಫ್ಯಾನ್: ಭಾರತಕ್ಕೆ 100% ಗ್ಯಾರಂಟಿ ಕೊಟ್ಟ ಡೊನಾಲ್ಡ್...

ಐ ಲವ್ ಇಂಡಿಯಾ, ನಾನು ಮೋದಿ ಬಿಗ್ ಫ್ಯಾನ್: ಭಾರತಕ್ಕೆ 100% ಗ್ಯಾರಂಟಿ ಕೊಟ್ಟ ಡೊನಾಲ್ಡ್ ಟ್ರಂಪ್

ನವದೆಹಲಿ: “ನಾನು ಭಾರತ ಮತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತೇನೆ. ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ, ನನ್ನನ್ನ ನೂರಕ್ಕೆ ನೂರು ನಂಬಬಹುದು!” — ಹೀಗಂತ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರಿದ್ದಾರೆ.

ನವದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದೋಸ್ತಿ ಮತ್ತೊಮ್ಮೆ ಜಗತ್ತಿನ ಎದುರು ಅನಾವರಣಗೊಂಡಿದೆ. ಕಾರ್ಯಕ್ರಮದ ಲೈವ್‌ನಲ್ಲೇ ಯುಎಸ್ ರಾಯಭಾರಿ ಸೆರ್ಗಿಯೊ ಗೋರ್ ಅವರಿಗೆ ಫೋನ್ ಮಾಡಿದ ಟ್ರಂಪ್, ಭಾರತ ಹಾಗೂ ಪಿಎಂ ಮೋದಿ ಮೇಲಿನ ತಮ್ಮ ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ.

ಮೋದಿ ಅಮೆರಿಕದ ಉತ್ತಮ ಸ್ನೇಹಿತರೆಂದು ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ನಡೆದ ಯುಎಸ್ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಮುಖಾಂಶಗಳು ಇಲ್ಲಿವೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಮತ್ತು ಮೋದಿ ಮೇಲಿನ ಅಭಿಮಾನ: ನವದೆಹಲಿಯಲ್ಲಿರುವ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದರು. “ನನಗೆ ಭಾರತ ಎಂದರೆ ತುಂಬಾ ಇಷ್ಟ. ಪ್ರಧಾನಿ ಮೋದಿ ನನ್ನ ಅತ್ಯುತ್ತಮ ಸ್ನೇಹಿತ ಮತ್ತು ಗ್ರೇಟ್ ನಾಯಕ” ಎಂದು ಶ್ಲಾಘಿಸಿದರು.

100 ಪ್ರತಿಶತ ಬೆಂಬಲ: ಭಾರತವು ಯಾವುದೇ ಸಂದರ್ಭದಲ್ಲೂ ಅಮೆರಿಕವನ್ನು ನೂರಕ್ಕೆ ನೂರರಷ್ಟು ನಂಬಬಹುದು ಮತ್ತು ತಮ್ಮ ಬೆಂಬಲ ಯಾವಾಗಲೂ ಇರುತ್ತದೆ ಎಂದು ಟ್ರಂಪ್ ಭರವಸೆ ನೀಡಿದರು. ಇದೇ ವೇಳೆ ಅವರು ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರನ್ನು ದೇಶದ ಇತಿಹಾಸದಲ್ಲೇ ಅತ್ಯುತ್ತಮ ವಿದೇಶಾಂಗ ಕಾರ್ಯದರ್ಶಿ ಎಂದು ಕೊಂಡಾಡಿದರು.

ಪ್ರಮುಖ ಗಣ್ಯರ ಉಪಸ್ಥಿತಿ: ಈ ಕಾರ್ಯಕ್ರಮದಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಯುಎಸ್ ರಾಯಭಾರಿ ಸೆರ್ಗಿಯೋ ಗೋರ್ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಉಪಸ್ಥಿತರಿದ್ದರು. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ‘ಜೈ ಹೋ’ ಹಾಡಿನ ಪ್ರದರ್ಶನ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.

ಬಲಿಷ್ಠವಾಗುತ್ತಿರುವ ದ್ವಿಪಕ್ಷೀಯ ಸಂಬಂಧ: ಯುಎಸ್ ರಾಯಭಾರಿ ಸೆರ್ಗಿಯೋ ಗೋರ್ ಮಾತನಾಡಿ, “ಅಮೆರಿಕ ಫಸ್ಟ್ ಎಂದರೆ ಅಮೆರಿಕ ಮಾತ್ರ ಎಂದರ್ಥವಲ್ಲ” ಎಂದು ಸ್ಪಷ್ಟಪಡಿಸಿದರು. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಅಂತಿಮ ರೂಪ ಸಿದ್ಧವಾಗುತ್ತಿದ್ದು, ಮುಂಬರುವ ವಾರಗಳಲ್ಲಿ ಅದಕ್ಕೆ ಸಹಿ ಹಾಕಲಾಗುವುದು ಎಂದು ತಿಳಿಸಿದರು.

ದಾಖಲೆಯ ಹೂಡಿಕೆ: ಭಾರತದಲ್ಲಿರುವ ಯುಎಸ್ ರಾಯಭಾರ ಕಚೇರಿಯು ಜಾಗತಿಕ ಮಟ್ಟದಲ್ಲೇ ನಂಬರ್ ಒನ್ ಸ್ಥಾನ ಪಡೆದಿದ್ದು, ಭಾರತದಿಂದ ಅಮೆರಿಕಕ್ಕೆ ಅಂದಾಜು 20.5 ಬಿಲಿಯನ್ ಯುಎಸ್ ಡಾಲರ್ ಮೊತ್ತದ ಹೊಸ ಹೂಡಿಕೆಯನ್ನು ತರುವಲ್ಲಿ ಯಶಸ್ವಿಯಾಗಿದೆ ಎಂದು ಗೋರ್ ಹೆಮ್ಮೆಯಿಂದ ಹಂಚಿಕೊಂಡರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular