HomeKarnatakaಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಇಬ್ಬರು ಅರೆಸ್ಟ್

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಇಬ್ಬರು ಅರೆಸ್ಟ್

ಗದಗ: ಟ್ಯೂಷನ್ ಗೆ ಹೋಗಿದ್ದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಲಕ್ಷ್ಮೇಶ್ವರ ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದಿದೆ.

ಅಪ್ರಾಪ್ತೆ ತಾಯಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಲಕ್ಷ್ಮೇಶ್ವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲಾಭಕ್ಷ ಕೊಪ್ಪದ, ಆಸಿಫ್ ನದಾಫ್ ಬಂಧಿತ ಆರೋಪಿಗಳು.

ಆರೋಪಿಗಳು ಅದೇ ಗ್ರಾಮದವರಾಗಿದ್ದು, ನಿಮ್ಮ ಅಣ್ಣ ಕರೆಯುತ್ತಿದ್ದಾನೆ ಬಾ ಎಂದು ವಾಹನವೊಂದರಲ್ಲಿ ಒತ್ತಾಯಪೂರ್ವಕವಾಗಿ ಅಪ್ರಾಪ್ತ ಪುತ್ರಿಯನ್ನು ಕರೆದೊಯ್ದು ಮಾರ್ಗಮಧ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ಲಕ್ಷ್ಮೇಶ್ವರ ಠಾಣೆಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಅಲ್ಲಾಭಕ್ಷ ಕೊಪ್ಪದ ಅತ್ಯಾಚಾರ ಎಸಗಿದ್ದು, ಆಸಿಫ್ ಸಹಕಾರ ನೀಡಿದ್ದಾನೆ. ಅಲ್ಲದೆ, ಯಾರಿಗಾದರೂ ವಿಷಯ ತಿಳಿಸಿದಲ್ಲಿ ಕೊಲೆ ಮಾಡುವುದಾಗಿ ಬಾಲಕಿಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಲಕ್ಷ್ಮೇಶ್ವರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular