HomeKarnatakaBIG NEWS: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆಗೆ ನಿರ್ಧಾರ

BIG NEWS: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆಗೆ ನಿರ್ಧಾರ

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವದ ಎರಡು ಗ್ಯಾರಂಟಿ ಯೋಜನೆ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳನ್ನು ಪರಿಷ್ಕರಿಸಲಾಗುವುದು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಶಾಸಕರ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ ಮಾಡಲಾಗುತ್ತಿದೆ. ಆದರೆ ಅರ್ಹತೆ ಇಲ್ಲದವರು ಮತ್ತು ಮೃತಪಟ್ಟವರ ಹೆಸರಿನಲ್ಲಿಯೂ ಹಣ ಪಡೆಯಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಲ್ಲಿಯೂ ಅನೇಕರು ಅರ್ಹತೆ ಮೀರಿದವರು ಫಲಾನುಭವಿಗಳಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡು ಯೋಜನೆಗಳ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪರಿಷ್ಕರಣೆ ಮಾಡಿ ಹಣ ಹಾಕಲು ಚಿಂತನೆ ನಡೆದಿದೆ. ಎರಡು ಗ್ಯಾರಂಟಿಗಳ ಫಲಾನುಭವಿಗಳ ಪರಿಷ್ಕರಣೆಗೆ ಚಿಂತನೆ ನಡೆದಿದೆ. ಗೃಹಲಕ್ಷ್ಮಿ 1.24 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಸ್ವೀಕರಿಸಲಾಗುವುದು. ಯಾರು ಹೊಸದಾಗಿ ಅರ್ಜಿ ಸಲ್ಲಿಸುವುದಿಲ್ಲವೋ ಅಂತಹವರ ಗೃಹಲಕ್ಷ್ಮಿ  ಗ್ಯಾರಂಟಿ ನಿಲ್ಲಿಸಲಾಗುವುದು. ಮೃತಪಟ್ಟವರ ಹೆಸರಲ್ಲಿ ಲಕ್ಷಾಂತರ ಮೊಬೈಲ್ ನಂಬರ್ ಗಳು ಇವೆ. ದೊಡ್ಡ ಸಂಖ್ಯೆಯಲ್ಲಿ ಫಲಾನುಭವಿಗಳಿಗೆ ಕೊಕ್ ನೀಡಲು ಸರ್ಕಾರ ಮುಂದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular