HomeIndiaBIG NEWS: ಮೇಕೆದಾಟು ಯೋಜನೆಗೆ ಭೂಮಿಪೂಜೆಗೆ ಕರ್ನಾಟಕ ಸರ್ಕಾರ ಸಿದ್ಧತೆ: ತಮಿಳುನಾಡು ಸಿಎಂ ವಿಜಯ್ ಅಡ್ಡಗಾಲು

BIG NEWS: ಮೇಕೆದಾಟು ಯೋಜನೆಗೆ ಭೂಮಿಪೂಜೆಗೆ ಕರ್ನಾಟಕ ಸರ್ಕಾರ ಸಿದ್ಧತೆ: ತಮಿಳುನಾಡು ಸಿಎಂ ವಿಜಯ್ ಅಡ್ಡಗಾಲು

ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಮೇಕೆದಾಟು ಯೋಜನೆಗೆ ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಡ್ಡಗಾಅಲು ಹಾಕಿದ್ದಾರೆ. ಮೇಕೆದಾಟು ಯೋಜನೆಗೆ ಕರ್ನಾಟಕ ಸರ್ಕಾರ ಭೂಮಿ ಪೂಜೆಗೆ ಸಿದ್ಧತೆ ನಡೆಸಿದ ಬೆನ್ನಲ್ಲೇ ತಮಿಳುನಾಡು ಸಿಎಂ ವಿಜಯ್ ಮಹತ್ವದ ಸಭೆ ನಡೆಸಿದ್ದಾರೆ.

ಮೇಕೆದಾಟು ಯೋಜನೆ ವಿಚಾರವಾಗಿ ಚೆನ್ನೈನಲ್ಲಿ ಸಿಎಂ ವಿಜಯ್ ಅಧಿಕಾರಿಗಳು ಹಾಗೂ ಕಾನೂನು ಸಲಹೆಗಾರರ ಸಭೆ ಕರೆದಿದ್ದು, ಸಭೆಯಲ್ಲಿ ಕಾನೂನು ಹೋರಾಟಕ್ಕೆ ಸೂಚನೆ ನೀಡಿದ್ದಾರೆ.

2018 ಹಾಗೂ 2022ರಲ್ಲಿ ಯೋಜನೆ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿತ್ತು. ಆದಾಗ್ಯೂ ತಮಿಳುನಾಡು ಮತ್ತೆ ಮೇಲ್ಮನವಿ ಸಲ್ಲಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025ರಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದೆ. ಕೇಂದ್ರ ಜಲ ಆಯೋಗ ಮಾತ್ರ ಈ ಬಗ್ಗೆ ನಿರ್ಧರಿಸಲು ಸಾಧ್ಯ ಎಂದು ಹೇಳಿ ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ನೂತನ ಸಿಎಂ ವಿಜಯ್ ಕಾನೂನು ತಜ್ಞರ ಜೊತೆ ಸಭೆ ನಡೆಸಿದ್ದು, ಮತ್ತೆ ಕಾನೂನು ಹೋರಾಟಕ್ಕೆ ಸಿದ್ಧರಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular