ಉಡುಪಿ: 2015ರ ನಂತರದ ಎಲ್ಲಾ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಉಡುಪಿಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅರಣ್ಯ ಭೂಮಿ ಒತ್ತುವರಿ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ತಳೆದಿದ್ದು, ಹೊಸ ಒತ್ತುವರಿಗೆ ಅವಕಾಶ ನೀಡಬಾರದು. 2015ರ ನಂತರದ ಎಲ್ಲಾ ಒತ್ತುವರಿ ತೆರವುಗೊಳಿಸಬೇಕು ಎಂದು ಹೇಳಿದ್ದಾರೆ.
2015 ಕ್ಕೆ ಮೊದಲು ರಾಜ್ಯದಲ್ಲಿ ಒಟ್ಟು ಎರಡು ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿರುವುದಾಗಿ ಪ್ರಮಾಣಪತ್ರ ಸಲ್ಲಿಸಲಾಗಿದೆ. ಇದರಲ್ಲಿ ಜೀವನೋಪಾಯಕ್ಕಾಗಿ ಒತ್ತುವರಿ ಮಾಡಿರುವ ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದ ಕುಟುಂಬಗಳಿಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ತೆರವು ಮಾಡದಂತೆ ನಿರ್ಣಯಿಸಿದೆ. 3 ಎಕರೆಗಿಂತ ಹೆಚ್ಚಿನ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

