HomeBusinessರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ...

ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ.

ಕಾವೇರಿಯಲ್ಲಿ ಸೋಮವಾರ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಉಪಸ್ಥಿತಿಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಟೊಯೋಟಾ ಕಂಪನಿಯ ಪರವಾಗಿ ಸಿಒಒ ಮತ್ತು ವಿಶೇಷ ಯೋಜನೆಯ ನಿರ್ದೇಶಕ ಸುದೀಪ್ ದಳವಿ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಹೂಡಿಕೆಗೆ ನಮ್ಮ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ. ಈ ರೀತಿಯ ಘಟಕ ಸ್ಥಾಪನೆ ಆಗುತ್ತಿರುವುದು ವಿಶ್ವದಲ್ಲೇ ಮೊದಲು ಎನ್ನುವ ವಿಷಯ ಕೇಳಿ ಸಂತಸವಾಯಿತು. ಇದರಿಂದ ರಾಜ್ಯದಲ್ಲಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. ಇದಕ್ಕಾಗಿ ಅಲ್ಲಿ ಟೊಯೋಟಾ ಕಂಪನಿಗೆ 300 ಎಕರೆ ಭೂಮಿ ಒದಗಿಸಲಾಗುವುದು. ಇಲ್ಲಿ ವಾಹನಗಳ ತಯಾರಿಕೆ, ಪರೀಕ್ಷೆಗಳು, ಆಧುನಿಕ ವಾಹನ ತಯಾರಿಕಾ ಸ್ಥಾವರ ಆರಂಭ ಎಲ್ಲವೂ ನಡೆಯಲಿವೆ. ಇದು ರಾಜ್ಯದ ಯುವಜನರಿಗೆ ವರದಾನವಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈಗಾರಿಕಾ ಇಲಾಖೆ ಆಯುಕ್ತರಾದ ಖುಷ್ಬೂ ಗೋಯೆಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಟೊಯೊಟಾ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಯೋಶಿನೋರಿ ನೋರಿಟಾಕೆ, ಉನ್ನತ ಮಟ್ಟದ ಪ್ರತಿನಿಧಿಗಳಾದ ಜಿ.ಶಂಕರ್, ವಿಕ್ರಮ್ ಗುಲಾಟಿ, ಉಪಾಧ್ಯಕ್ಷ ರಮೇಶ್ ರಾವ್, ಜನರಲ್ ಮ್ಯಾನೇಜರ್ ಎಚ್ ಜೆ ಕಿರಣ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ವಿನ್ ಸಿಟಿಯಲ್ಲಿ ಹೂಡಿಕೆ ಮಾಡಲು ಜಾಗತಿಕ ಮಟ್ಟದ ಏಳೆಂಟು ವಿಶ್ವವಿದ್ಯಾಲಯಗಳು, ಆರೋಗ್ಯ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು ಈಗಾಗಲೇ ಮುಂದೆ ಬಂದಿವೆ. ಅವುಗಳೊಂದಿಗೂ ತ್ವರಿತವಾಗಿ ಒಡಂಬಡಿಕೆಗೆ ಅಂತಿಮರೂಪ ನೀಡಲಾಗುವುದು.

ಈ ಅತ್ಯಾಧುನಿಕ ನಗರವು ಒಟ್ಟು 5,800 ಎಕರೆಯಲ್ಲಿ ಹಂತಹಂತವಾಗಿ ಅಸ್ತಿತ್ವಕ್ಕೆ ಬರಲಿದೆ. ಈಗಾಗಲೇ ಮೊದಲ ಹಂತದ ಅಭಿವೃದ್ಧಿ ಪ್ರಗತಿಯಲ್ಲಿದೆ. ಈ ಯೋಜನೆಗೆ ಒಟ್ಟು 48 ಸಾವಿರ ಕೋಟಿ ರೂಪಾಯಿ ಹೂಡಿಕೆ ಆಗಲಿದ್ದು, ಒಟ್ಟಾರೆಯಾಗಿ 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular