HomeKarnatakaಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನು

ಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನು

ಬೆಂಗಳೂರು: ಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊಂದಿರುವ 75 ವರ್ಷದ ಮಾವನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದಾಗಿ ಸೊಸೆ ಪ್ರಮಾಣ ಪತ್ರ ಸಲ್ಲಿಸಿದ್ದು, ಇದನ್ನು ಆಧರಿಸಿ ಹೈಕೋರ್ಟ್ ಜಾಮೀನು ನೀಡಿದೆ. ಜಾಮೀನು ಮಂಜೂರು ಮಾಡುವಂತೆ ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠ ಈ ಆದೇಶ ನೀಡಿದೆ.

ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಕೀಲರ ಮೂಲಕ ಪ್ರಮಾಣ ಪತ್ರ ಸಲ್ಲಿಸಿದ ಸಂತ್ರಸ್ತೆ ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲಾಗುತ್ತಿದೆ. ಆರೋಪಿಯ ಜಾಮೀನಿಗೆ ಆಕ್ಷೇಪಣೆ ಇಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ದಾಖಲಿಸಿದ ನ್ಯಾಯಪೀಠ ಆರೋಪಿಯ ವಯಸ್ಸು ಮತ್ತು ನ್ಯಾಯಾಂಗ ಬಂಧನ ಪರಿಶೀಲಿಸಿ ಜಾಮೀನು ಮಂಜೂರು ಮಾಡಲಾಗುತ್ತಿದೆ. ಆರೋಪಿ ಒಂದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರು ಸ್ಥಳೀಯ ನಿವಾಸಿಗಳ ಭದ್ರತಾ ಖಾತರಿ ಒದಗಿಸಬೇಕೆಂಬುದು ಸೇರಿದಂತೆ ವಿವಿಧ ಷರತ್ತು ವಿಧಿಸಿದೆ.

ಅಲ್ಲದೇ, ಜಾಮೀನು ಮಂಜೂರು ಮಾಡಿರುವುದು ಆರೋಪಿ ನಿರ್ದೋಷಿ ಎಂದು ಸಾಬೀತುಪಡಿಸುವುದಿಲ್ಲ. ಕೇಸ್ ವಿಚಾರಣೆ ಮುಂದುವರೆಯಲಿದೆ. ಆರೋಪಗಳ ಸತ್ಯಾಸತ್ಯತೆ ಬಗ್ಗೆ ಅಂತಿಮ ತೀರ್ಮಾನವನ್ನು ವಿಚಾರಣಾ ನ್ಯಾಯಾಲಯ ಕೈಗೊಳ್ಳಲಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ತನ್ನ ಮಾವನಿಂದ ಲೈಂಗಿಕ ದೌರ್ಜನ್ಯ, ಪತಿ, ಅತ್ತೆ ಹಾಗೂ ಅಜ್ಜಿಯಿಂದ ಕಿರುಕುಳ, ಹಿಂಸೆಗೆ ಒಳಗಾದ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಈ ಸಂಬಂಧ ಮಾವ ಮತ್ತು ಅತ್ತೆ ಕುಟುಂಬದವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಆರೋಪಿಗೆ 75 ವರ್ಷವಾಗಿದ್ದು, ಹಿರಿಯ ನಾಗರಿಕರಾಗಿದ್ದಾರೆ. ಎಂಟು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪ ಸಂಬಂಧ ದೂರಿನ ದಿನಾಂಕ ಉಲ್ಲೇಖಿಸಿಲ್ಲ. ಸಾಕ್ಷಿಗಳಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular