HomeKarnatakaBIG NEWS: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

BIG NEWS: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕಳೆದ ಕೆಲ ದಿನಗಳಿಂದ ತಾರಕ್ಕೇರಿದ್ದ ಸಿಎಂ ಸ್ಥಾನ ಬದಲಾವಣೆ ವಿಚಾರ, ಕುರ್ಚಿ ಕಿತ್ತಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನಲಾಗಿದೆ.

ದೆಹಲಿಯಲ್ಲಿ ಎಐಸಿಸಿ ನಾಯಕರು ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಮಂಗಳವಾರ ನಡೆದ 7 ಗಂಟೆಗಳ ಸುದೀರ್ಘ ಸಂಧಾನ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಅಧಿಕಾರ ತ್ಯಾಗಕ್ಕೆ ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರದ ಬಗ್ಗೆ ಗೃಹ ಸಚಿವ ಡಾಅ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಿನ್ನೆ ನಡೆದ ಸಭೆಯಲ್ಲಿ ಒಳಗಡೆಗೆ ಏನು ಚರ್ಚೆಯಾಗಿದೆ ಎಂಬುದು ನಮಗೆ ಗೊತ್ತಿಲ್ಲ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಮ್ಮ ಜೊತೆ ಚರ್ಚಿಸಿ ಈ ಬಗ್ಗೆ ಮಾಹಿತಿ ನೀಡುತ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆ ಸೇರಿದಂತೆ ಎಲ್ಲದರ ಬಗ್ಗೆಯೂ ಸುರ್ಜೇವಾಲಾ ಅವರು ಇಂದು ಅಥವಾ ನಾಳೆ ಸುದ್ದಿಗೋಷ್ಠಿ ನಡೆಸಿ ವಿವರಿಸಲಿದ್ದಾರೆ ಎಂದು ಹೇಳಿದರು. ಈ ಮೂಲಕ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಲಿ, ಹೈಕಮಾಂಡ್ ನಡೆಸಿದ ಮ್ಯಾರಥಾನ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆಯಾಗಲಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular