HomeLatest NewsBREAKING: ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

BREAKING: ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಪತ್ರ ರವಾನೆಯಾಗಿದೆ. ರಾಜ್ಯಪಾಲರು ಸಮಯ ನೀಡಿದಲ್ಲಿ ನಾಳೆ ಬೆಳಿಗ್ಗೆ 10:30ಜ್ಯಪಾಲರನ್ನು ಭೇಟಿಯಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular