HomeLatest Newsಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ: ಅವರು ಹಳೇ ಹುಲಿ; ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ:...

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ: ಅವರು ಹಳೇ ಹುಲಿ; ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿಯ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ ಎಂದು ಎಂದಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ. ಮೂರು ವರ್ಷದ ಸರ್ಕಾರದಲ್ಲಿ 2.5 ವರ್ಷ ಸಿಎಂ ಬದಲಾವಣೆ ಬಗ್ಗೆಯೆ ಚರ್ಚೆಯಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ. ಒಂದು ಕಡೆ ಬರಗಾಲ ಮತ್ತೊಂದು ಕಡೆ ನೆರೆ ಬರುತ್ತಿದೆ. ಬೆಂಗಳೂರು ಮಳೆಯಿಂದ ಮುಳುಗುತ್ತಿದೆ, ಗಾರ್ಬೆಜ್‌ನ ಹಗರಣ ನಡೆಯುತ್ತಿದೆ. ಇವೆಲ್ಲವನ್ನೂ ಬಿಟ್ಟು ಕಾಂಗ್ರೆಸ್ ನಾಯಕರು ಖುರ್ಚಿಗಾಗಿ ಹೊಡೆದಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಖುರ್ಚಿ ಉಳಿಸುವ ಯತ್ನ ಮಾಡುತ್ತಿದ್ದರೆ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಜನರು ಬಡವಾಗಿದ್ದಾರೆ. ಯಾವುದೆ ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ, ಅಭಿವೃದ್ಧಿಗೆ ಹಣವಿಲ್ಲ. ಜನರ ಕೆಲಸ ಮಾಡಲು 135 ಸೀಟ್ ಗೆಲ್ಲಿಸಿದ್ದಾರೆ, ಜನರ ಕೆಲಸ ಮಾಡಿ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular