HomeKarnatakaBIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಎನ್ನುವುದೆಲ್ಲ ಊಹಾಪೋಹ: ಸಚಿವ ಎಂ.ಬಿ.ಪಾಟೀಲ್

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಎನ್ನುವುದೆಲ್ಲ ಊಹಾಪೋಹ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್, ಸಿಂ ರಾಜೀನಾಮೆ ಎನ್ನುವ ಮಾತುಗಳು ಕೇವಲ ಊಹಾಪೋಹ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಬವವಾಗಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸುರ್ಜೇವಾಲಾ, ವೇಣುಗೋಪಾಲ್ ಅವರೆಲ್ಲರೂ ಈಗಾಗಲೇ ಹೇಳಿದ್ದಾರೆ. ವೇಣುಗೋಪಾಲ್ ಅವರು, ಸಿಎಂ, ಡಿಸಿಎಂ ಸಮ್ಮುಖದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತಾಡಿದ್ದು, ಅವರ ಸ್ಟೇಟ್​ಮೆಂಟ್ ನಿಮ್ಮ ಮಾಧ್ಯಮಗಳಲ್ಲೇ ಬಂದಿದೆ. ಅವರು ಹೇಳಿದ್ದೇನು?. ರಾಜ್ಯಸಭೆ, ಎಂಎಲ್​ಸಿ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಅಂತಾ ಹೇಳಿದ್ದಾರೆ. ಬೇರೆಯದ್ದೆಲ್ಲಾ ಊಹಾಪೋಹ ಅಂತಾ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಬೇರೆ ಯಾವುದೇ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ. ಸುಮ್ಮನೆ ಕೆ.ಜೆ. ಜಾರ್ಜ್ ಮನೆಯಲ್ಲಿ‌ ಇದ್ದೆವು. ಬೆಳಗ್ಗೆ, ರಾತ್ರಿ ಕೆ.ಜೆ. ಜಾರ್ಜ್ ಮನೆಯಲ್ಲಿ ಒಳ್ಳೆಯ ಊಟ ಮಾಡಿದೆವು. ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಜೊತೆಯೇ ಇದ್ದೆವು. ಒಟ್ಟಿಗೆ ದೆಹಲಿಗೆ ಹೋಗಿ ಬಂದಿದ್ದೇವೆ ಎಂದು ತಿಳಿಸಿದರು.‌

ಕೆ. ಸಿ. ವೇಣುಗೋಪಾಲ್, ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಪಬ್ಲಿಕ್ ಸ್ಟೇಟ್​ಮೆಂಟ್ ಕೊಟ್ಟಿದ್ದಾರೆ. ರಾಜ್ಯಸಭೆ ಚುನಾವಣೆ ಬಗ್ಗೆ ನಮ್ಮನ್ನು ಕರೆಸಿದ್ದಾರೆ ಅಂತಲೂ ಹೇಳಿದ್ದಾರೆ. ಬೇರೆ ಯಾವುದೇ ವಿಚಾರ ಚರ್ಚೆ ಆಗಿಲ್ಲ. ಸಿಎಂ ಸಿದ್ದರಾಮಯ್ಯ ಹೋದಾಗ ನಾವು ಕೂಡ ಜೊತೆಗೆ ಹೋಗಿದ್ದೆವು. ಬೇರೆ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ. ಅಂತಹ ಪ್ರಶ್ನೆಯೇ ಉದ್ಭವವಾಗಲ್ಲ. ನಾಳೆ ಬ್ರೇಕ್ ಫಾಸ್ಟ್ ನಂತರ ರಾಜೀನಾಮೆ ಕೊಡುವುದು ಊಹಾಪೋಹಗಳು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular