HomeKarnatakaBREAKING : ಭಾವನಾ ರಾಮಣ್ಣ ಸೇರಿ 31 'KPCC' ಪದಾಧಿಕಾರಿಗಳಿಗೆ ಗೇಟ್ ಪಾಸ್ ನೀಡಿದ ಡಿಸಿಎಂ...

BREAKING : ಭಾವನಾ ರಾಮಣ್ಣ ಸೇರಿ 31 ‘KPCC’ ಪದಾಧಿಕಾರಿಗಳಿಗೆ ಗೇಟ್ ಪಾಸ್ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು  :   ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಭೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು 31 ಜನ ಪದಾಧಿಕಾರಿಗಳನ್ನು ಹುದ್ದೆಯಿಂದ ಕೈಬಿಡುವ ಮೂಲಕ ಕಠಿಣ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಹೌದು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಭೆಗೆ ಗೈರು ಹಾಜರಾಗಿದ್ದ ಕೆಪಿಸಿಸಿ (KPCC) ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಠಿಣ ಕ್ರಮ ಕೈಗೊಂಡಿದ್ದಾರೆ.ಸಭೆಗೆ ಗೈರು ಹಾಜರಾಗಿದ್ದ 31 ಕೆಪಿಸಿಸಿ ಪದಾಧಿಕಾರಿಗಳನ್ನು ಪಕ್ಷದ ಹುದ್ದೆಯಿಂದ ತಕ್ಷಣವೇ ಕೈಬಿಡಲಾಗಿದೆ (ಗೇಟ್‌ಪಾಸ್ ನೀಡಲಾಗಿದೆ).

ಈ ಪಟ್ಟಿಯಲ್ಲಿ ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ, ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಮತ್ತು ಸಿ.ಆರ್. ಮನೋಹರ್ ಸೇರಿದಂತೆ ಒಟ್ಟು ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳು ಸೇರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 24 ರಂದು ಬೆಂಗಳೂರಿನ ಹೊರವಲಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಪಕ್ಷ ಸಂಘಟನೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.ಈ ಸಭೆಗೆ ಪದಾಧಿಕಾರಿಗಳು ಗೈರು ಹಾಜರಾಗಿದ್ದನ್ನು ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಅದರಂತೆ ಡಿಕೆ ಶಿವಕುಮಾರ್ ಅವರು ಈ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular