HomeLatest Newsಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: 8 ಗಂಟೆಗಳ ಕಾಲ ಆಗಸದಲ್ಲಿಯೇ ಹಾರಾಡಿದ ವಿಮಾನ

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: 8 ಗಂಟೆಗಳ ಕಾಲ ಆಗಸದಲ್ಲಿಯೇ ಹಾರಾಡಿದ ವಿಮಾನ

ನವದೆಹಲಿ: ದೆಹಲಿಯಿಂದ ಅಮೆರಿಕಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ 8 ಗಂಟೆಗಳ ಕಾಲ ಆಗಸದಲ್ಲಿಯೇ ಹಾರಾಟ ನಡೆಸಿ ವಾಪಸ್ ಆದ ಘಟನೆ ನಡೆದಿದೆ.

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ 230 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದಾಗಿ ದೆಹಲಿಗೆ ವಾಪಸಾಗಿದೆ. ಎಂಟು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಮತ್ತೆ ದೆಹಲಿಗೆ ಬಂದಿಳಿದಿದೆ.

ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿಯ ಪ್ರಕಾರ, ಮೇ 27 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ‘AI173’ ವಿಮಾನವು ನಿಗದಿತ ಸಮಯಕ್ಕೆ ಟೇಕ್ ಆಫ್ ಆಗಿತ್ತು. ಆದರೆ, ಚೀನಾದ ವಾಯುಪ್ರದೇಶದಲ್ಲಿ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ನಂತರ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇದನ್ನು ಗಮನಿಸಿದ ಪೈಲಟ್‌ ನಿಗದಿತ ತುರ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿ, ತಕ್ಷಣವೇ ವಿಮಾನವನ್ನು ದೆಹಲಿಯ ಕಡೆಗೆ ತಿರುಗಿಸಲು ನಿರ್ಧರಿಸಿದರು. ಸುಮಾರು 8 ಗಂಟೆಗಳ ದೀರ್ಘ ಹಾರಾಟದ ನಂತರ ವಿಮಾನವು ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನಯಾನ ಸಂಸ್ಥೆಯು ತನ್ನ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯೇ ತನಗೆ ಅತ್ಯುನ್ನತ ಆದ್ಯತೆ ಎಂದು ಹೇಳಿದ್ದು, ಹಠಾತ್ ಆದ ಬದಲಾವಣೆಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ. ತಕ್ಷಣ ಏರ್ ಇಂಡಿಯಾ ಸಂಸ್ಥೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ.

ದೆಹಲಿಯಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಹೋಟೆಲ್ ವಸತಿ, ಉಪಾಹಾರ ಹಾಗೂ ಅವರ ಇಷ್ಟದಂತೆ ಮುಂದಿನ ವಿಮಾನ ವೇಳಾಪಟ್ಟಿಯನ್ನು ಬದಲಾಯಿಸಲು ಅಗತ್ಯವಿರುವ ಎಲ್ಲಾ ನೆರವನ್ನು ಏರ್ ಇಂಡಿಯಾದ ಸಿಬ್ಬಂದಿ ಒದಗಿಸುತ್ತಿದ್ದಾರೆ. ಪ್ರಸ್ತುತ ವಿಮಾನವನ್ನು ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular