HomeKarnatakaSHOCKING : ಬೆಂಗಳೂರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ರೇಡಿಯೋ ಜಾಕಿ ಆತ್ಮಹತ್ಯೆ.!

SHOCKING : ಬೆಂಗಳೂರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ರೇಡಿಯೋ ಜಾಕಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನ ಮನ್ಯಾಟಾ ಟೆಕ್ ಪಾರ್ಕ್ ಸಮೀಪದ ತನ್ನ ಫ್ಲಾಟ್ನಲ್ಲಿ ಮುಂಬೈನ ಮಾಜಿ ರೇಡಿಯೋ ಜಾಕಿ (RJ) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟವರನ್ನು ಮನೀಶಾ ಪ್ರಸಾದ್ (48) ಎಂದು ಗುರುತಿಸಲಾಗಿದೆ. ಆಕೆ ತನ್ನ ಲಿವ್-ಇನ್ ಪಾರ್ಟ್ನರ್ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಹೊರಿಸಿ ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಮನೀಶಾ ಅವರು ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದರು. 2024ರಲ್ಲಿ ಪತಿಯಿಂದ ವಿಚ್ಛೇದನ ಪಡೆದ ನಂತರ, ಈ ವರ್ಷದ ಏಪ್ರಿಲ್ನಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ್ದರು.ಮನೀಶಾ ಅವರು ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬುವವರೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು. ಈತ ಹಿಮಾಚಲ ಪ್ರದೇಶದವರಾಗಿದ್ದು, ಮುಂಬೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಿರುಕುಳದ ಆರೋಪ: ಮನೀಶಾ ಅವರು ಮುಂಬೈನಲ್ಲಿ ತಾವು ಅನುಭವಿಸುತ್ತಿದ್ದ ಮಾನಸಿಕ ಕಿರುಕುಳದಿಂದ ದೂರವಿರಲು ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದರು. ತನ್ನ ಎಲ್ಲಾ ವಸ್ತುಗಳನ್ನು ಮುಂಬೈನಿಂದ ಬೆಂಗಳೂರಿಗೆ ಸ್ಥಳಾಂತರಿಸಿದ ದಿನವೇ ಈ ದುರ್ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡೆತ್ ನೋಟ್ನಲ್ಲಿ ಏನಿದೆ?
ಪೊಲೀಸರು ಸ್ಥಳದಲ್ಲಿ ಮೂರು ಪುಟಗಳ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಅದರಲ್ಲಿ, “ಹರ್ಷವರ್ಧನ್ ಮತ್ತು ನಾನು ಕಳೆದ ಕೆಲವು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದೆವು. ಅವನ ಕುಟುಂಬಕ್ಕೂ ನಮ್ಮ ಸಂಬಂಧದ ಬಗ್ಗೆ ತಿಳಿದಿತ್ತು. ಆದರೆ, ಅವನು ಪ್ರತಿದಿನ ನನ್ನನ್ನು ಮಾನಸಿಕವಾಗಿ ಹಿಂಸಿಸುತ್ತಿದ್ದನು. ಅವನ ಕಿರುಕುಳವನ್ನು ತಡೆಯಲಾರದೆ ನಾನು ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ” ಎಂದು ಮನೀಶಾ ಬರೆದಿದ್ದಾರೆ.

ಪೊಲೀಸ್ ತನಿಖೆ
ಸಂಬಂಧಿಕರು ಮನೀಶಾ ಅವರಿಗೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗದ ಕಾರಣ, ಅವರು ಅಪಾರ್ಟ್ಮೆಂಟ್ಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಅಮೃತಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಗಮನಿಸಿ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ನೀವು ಅಂತಹ ಆಲೋಚನೆಗಳನ್ನು ಹೊಂದಿದ್ದರೆ, ದಯವಿಟ್ಟು ಸಹಾಯವಾಣಿಗೆ ಕರೆ ಮಾಡಿ. ಟೋಲ್-ಫ್ರೀ ಸಹಾಯವಾಣಿ ಸಂಖ್ಯೆಗಳು: 1056, 0471-2552056

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular