ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಚರ್ಚೆಗಳ ನಡುವೆ ಅವರ ನಿವಾಸದ ಮುಂದೆ ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯ ಬಳಿ ಭಾರೀ ಸಂಖ್ಯೆಯ ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ.
ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಬಾರದು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನೇ ಮುಂದುವರೆಸುವಂತೆ ಘೋಷಣೆ ಕೂಗಿದ್ದಾರೆ. ಹೈಕಮಾಂಡ್ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈಕಮಾಂಡ್ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕಾಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದು ಸಿದ್ದರಾಮಯ್ಯ ಅವರಿಂದ ಒಂದು ವೇಳೆ ಸಿಎಂ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸಿದರೆ 2028ಕ್ಕೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ. ಆಕ್ರೋಶ ವ್ಯಕ್ತಪಡಿಸುತ್ತಿದ್ದ ಸಿದ್ದರಾಮಯ್ಯ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

