HomeLatest NewsCLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿದ್ದರಾಮಯ್ಯ...

CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿದ್ದರಾಮಯ್ಯ ಬಣ

ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದೆ.

ಶಾಖಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತ ಸಚಿವರು, ನಾಯಕರು ರಾಜೀನಾಮೆ ನೀಡುವುನ್ನು ತಡೆಯಲು ಒತ್ತಡ ಹೇರಿದ್ದು ಅಗತ್ಯವಾದರೆ ಶಾಸಕರ ಸಹಿ ಸಂಗ್ರಹಿಸೋಣ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಒಪ್ಪದ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸಹಿ ಸಂಗ್ರಹದಂತಹ ಪ್ರಯತ್ನ ಮಾಡದಂತೆ ಬೆಂಬಲಿಗರಿಗೆ ತಾಕೀತು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ ಹಿರಿಯ ಸಚಿವರು ಶಾಸಕರೊಂದಿಗೆ ಚರ್ಚೆ ನಡೆಸಿದ ಸಿಎಂ ಸಹಿ ಸಂಗ್ರಹಿಸದಂತೆ ತಿಳಿಸಿದ್ದಾರೆ. ರಾಹುಲ್ ಗಾಂಧಿ ಸೂಚನೆಯಂತೆ ರಾಜೀನಾಮೆ ನೀಡುತ್ತೇನೆ. ನನ್ನ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಒಂದು ವೇಳೆ ನೀವು ಹೈಕಮಾಂಡ್ ಬಳಿಗೆ ಹೋಗುವುದಾದರೆ ನಾನು ರಾಜೀನಾಮೆ ನೀಡಿದ ನಂತರ ಹೋಗಿ, ನಿಮ್ಮ ಅಭಿಪ್ರಾಯ ತಿಳಿಸಿ. ನಾನು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಆಪ್ತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular