HomeAgricultureರೈತರಿಗೆ ಗುಡ್ ನ್ಯೂಸ್: ಬೇಡಿಕೆಯಂತೆ ರಸಗೊಬ್ಬರ ದಾಸ್ತಾನು

ರೈತರಿಗೆ ಗುಡ್ ನ್ಯೂಸ್: ಬೇಡಿಕೆಯಂತೆ ರಸಗೊಬ್ಬರ ದಾಸ್ತಾನು

ರೈತರ ಬೇಡಿಕೆಯಂತೆ ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಇರುವುದಿಲ್ಲವೆಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಜಿ.ಡಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಮೇ ವರೆಗೆ ರಸಗೊಬ್ಬರ ಬೇಡಿಕೆಯು 33,187 ಟನ್ ಯಿದ್ದು, 43,282 ಟನ್ ರಸಗೊಬ್ಬರ ದಾಸ್ತಾನಿಕರಿಸಿದ್ದು(Opening Balance ಸೇರಿ), 10,032 ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಬಾಕಿ ಉಳಿದಿರುವ ದಾಸ್ತಾನು 33,250 ಟನ್ ರಸಗೊಬ್ಬರ ವಿದ್ದು, ಇದರಲ್ಲಿ ಯೂರಿಯಾ 11,004 ಟನ್, ಡಿಎಪಿ 5002 ಟನ್, ಎಂಓಪಿ 1092 ಟನ್, ಕಾಂಪ್ಲೆಕ್ಸ್ 15,740 ಟನ್, ಎಸ್.ಎಸ್.ಪಿ 412 ಟನ್ ಮತ್ತು ಇದರ ಜೊತೆಗೆ 13,520 ಲೀಟರ್ ನ್ಯಾನೋ ಯೂರಿಯಾ, 1825 ಲೀಟರ್ ನ್ಯಾನೋ ಡಿಎಪಿ ಕೃಷಿ ಪರಿಕರ ಮಾರಾಟಗಾರ ಮಳಿಗೆಗಳಲ್ಲಿ ಲಭ್ಯವಿದ್ದು, ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ.

ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಸ್ಪ್ರೇ ಮಾಡುವುದರಿಂದ ಗಿಡಗಳಿಗೆ ನೇರವಾಗಿ ಪೋಷಕಾಂಶ ದೊರೆಯುವುದದರಿಂದ ನೀರು ಹಾಗೂ ಮಣ್ಣನ್ನು ಸಂರಕ್ಷಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಕೊಪ್ಪಳ ಜಿಲ್ಲೆಯ ನಾನಾ ಗೋದಾಮುಗಳಿಗೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಯೂರಿಯಾ ದಾಸ್ತಾನು ಪರಿಶೀಲನೆ ನಡೆಸಲಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಫ್ರೂಟ್ ಐಡಿ (ಎಫ್.ಐಡಿ) ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ರೈತರ ಎಫ್.ಐಡಿ ಸಂಖ್ಯೆ ಬಳಸಿಕೊಂಡು ಅವರು ಹೊಂದಿರುವ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಯೂರಿಯಾ ಅಗತ್ಯವಿದೆಯೋ ಅಷ್ಟನ್ನು ಮಾತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಪೂರ್ಣ ಪ್ರಕ್ರಿಯೆಯು ಕೆ-ಕಿಸಾನ್ ಯೂರಿಯಾ ವಿತರಣೆ ತಂತ್ರಾಂಶದ ಮೂಲಕವೇ ನಡೆಯಲಿದೆ.

 ರೈತರಲ್ಲದವರು ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಆಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವುದು, ರೈತರು ಮಿತವಾಗಿ ಗೊಬ್ಬರ ಬಳಸುವಂತೆ ಮಾಡುವುದು ಹಾಗೂ ಮಾರಾಟದ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ. ಎಫ್ಐಡಿ ಹೊಂದಿಲ್ಲದ ರೈತರು ತಕ್ಷಣವೇ ತಮ್ಮ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಎಫ್.ಐಡಿ ಸೃಜಿಸಿಕೊಳ್ಳಬೇಕು. ಈಗಾಗಲೇ ಎಫ್.ಐಡಿ ಹೊಂದಿರುವ ರೈತರು ತಮ್ಮ ಎಲ್ಲ ಸರ್ವೇ ನಂಬರ್ ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶವಿದೆ. ಇದರಿಂದ ತಮ್ಮ ಎಲ್ಲಾ ಜಮೀನುಗಳಿಗೆ ರಸಗೊಬ್ಬರ ಪಡೆಯಬಹುದಾಗಿದೆ.

 ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ಐಡಿ ನಮೂದಿಸಿ ಯೂರಿಯಾ ಮಾರಾಟ ಮಾಡಬೇಕು. ಒಂದು ವೇಳೆ ‘ಓ’ ಫಾರಂ ನವೀಕರಿಸದೆ ಮಾರಾಟ ಮಾಡಿದರೆ, ನಿಗದಿಪಡಿಸಿದ ಗರಿಷ್ಟ ಮಾರಾಟ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಿದರೆ ಅಥವಾ ಕೃಷಿಯೇತರ ಉದ್ದೇಶಗಳಿಗೆ ಯೂರಿಯಾ ಸರಬರಾಜು ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ರಸಗೊಬ್ಬರ ನಿಯಂತ್ರಣ ಕಾಯ್ದೆ 1985 ಮತ್ತು ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular