HomeLatest Newsಸಂತೆ, ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ 8 ಮಂದಿ ಅರೆಸ್ಟ್

ಸಂತೆ, ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ 8 ಮಂದಿ ಅರೆಸ್ಟ್

ರಾಮದುರ್ಗ: ಸಂತೆ, ಜಾತ್ರೆ ನಡೆಯುವ ವಿವಿಧ ಗ್ರಾಮಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ ಎಂಟು ಆರೋಪಿಗಳನ್ನು ಕಟಕೋಳ ಪೋಲಿಸ್ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ವಿಕಾಸ್ ವೆಂಕಟೇಶ ಭೋವಿ, ಪ್ರವೀಣ ಭೋವಿ, ಸಂತೋಷ್, ಶಿವು, ವೆಂಕಟೇಶ್, ಅಕ್ಷಯ್, ಹುಬ್ಬಳ್ಳಿಯ ಸಚಿನ್ ಲಕ್ಷ್ಮಣ ಕಲ್ಲವಡ್ಡರ ಅವರನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಆಧರಿಸಿ ಪೊಲೀಸರ ವಿಶೇಷ ತಂಡ ರಚಿಸಿ ಎಸ್ಪಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು. ಬಂಧಿತರಿಂದ ಒಟ್ಟು 4.94 ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಯ 40 ಮೊಬೈಲ್ ಫೋನ್ ಗಳು, 5.40 ಲಕ್ಷ ರೂಪಾಯಿ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಟಕೊಳ ಪೊಲೀಸ್ ಠಾಣೆ ವ್ಯಾಪ್ತಿಯ ಜನನಿಬಿಡ ಪ್ರದೇಶ, ಸಂತೆ, ಜಾತ್ರೆ ನಡೆಯುವ ವಿವಿಧ ಗ್ರಾಮಗಳಲ್ಲಿ ಆರೋಪಿಗಳು ಜನರ ಗಮನ ಬೇರೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular