HomeKarnatakaBIG NEWS : ಅಂದು, ಇಂದು, ಎಂದೆಂದು… ಒಗ್ಗಟ್ಟೇ ನಮ್ಮ ಶಕ್ತಿ ! ರಾಜ್ಯ ಕಾಂಗ್ರೆಸ್...

BIG NEWS : ಅಂದು, ಇಂದು, ಎಂದೆಂದು… ಒಗ್ಗಟ್ಟೇ ನಮ್ಮ ಶಕ್ತಿ ! ರಾಜ್ಯ ಕಾಂಗ್ರೆಸ್ ಪೋಸ್ಟ್


ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಗ್ಗಟ್ಟಿನ ಸಂದೇಶವನ್ನು ರವಾನಿಸಿದ್ದಾರೆ.ಅಂದು, ಇಂದು, ಎಂದೆಂದು… ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ!” ಎಂಬ ಘೋಷವಾಕ್ಯದೊಂದಿಗೆ ಕಾಂಗ್ರೆಸ್ ಜನಸಾಮಾನ್ಯರಿಗೆ ಐಕ್ಯತೆಯ ಭರವಸೆ ನೀಡಿದೆ.

ಇಂದು ಬೆಳಿಗ್ಗೆ ಸಿಎಂ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅಪ್ಪಿಕೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಗೌರವ ಸಲ್ಲಿಸಿದರು.ಸ್ವಇಚ್ಛೆಯಿಂದಲೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಭೆಯಲ್ಲಿ ತಿಳಿಸಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.ನಾಯಕತ್ವದ ಬದಲಾವಣೆಯಾದ್ರೂ, ರಾಜ್ಯದ ಅಭಿವೃದ್ಧಿ ಮತ್ತು ಜನಸೇವೆಗೆ ತಮ್ಮ ಬದ್ಧತೆ ಮುಂದುವರಿಯಲಿದೆ ಎಂದು ಕಾಂಗ್ರೆಸ್ ನಾಯಕರು ದೃಢಪಡಿಸಿದ್ದಾರೆ.

ಕಾಂಗ್ರೆಸ್ ಪೋಸ್ಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂದು, ಇಂದು, ಎಂದೆಂದು… ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ! ಎಂದು ಕಾಂಗ್ರೆಸ್ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯರ ಫೋಟೋ ಹಂಚಿಕೊಂಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular