ಬೆಂಗಳೂರು: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ದಾವಣಗೆರೆಯ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ ಪ್ಲಾಟಿನಂ ಜುಬಿಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇ 31 ರಂದು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳ್ತಂಗಡಿಯಲ್ಲಿರುವ ಸಿರಿ ಕೈಗಾರಿಕಾ ಉದ್ಯಾನವನವನ್ನು ಉದ್ಘಾಟಿಸಲಿದ್ದಾರೆ.

