ಬೆಂಗಳೂರು: ಮಾಜಿ ಸಚಿವ ವೆಂಕಟರಮಣಪ್ಪ(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ವೆಂಕಟರಮಣಪ್ಪ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟರಮಣಪ್ಪ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಲ್ಕು ಬಾರಿ ತುಮಕೂರು ಜಿಲ್ಲೆಯ ಪಾವಗಡ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ವೆಂಕಟರಮಣ ಪುತ್ರ ವೆಂಕಟೇಶ್ ಪಾವಗಡ ಕ್ಷೇತ್ರದ ಶಾಸಕರಾಗಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ, ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ದಶಕಗಳ ಕಾಲ ಜನಸೇವೆ ಮಾಡಿದ್ದರು. ಪಾವಗಡದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಗ್ರಾಮೀಣ ಭಾಗದ ಅಭಿವೃದ್ದಿಗೆ ಒತ್ತು ನೀಡಿದ್ದರು. ಪಾವಗಡ ಭಾಗದಲ್ಲಿ ರಸ್ತೆ, ನೀರು, ವಿದ್ಯುತ್, ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶ್ರಮಿಸಿದ್ದರು. ವಯೋಸಹಜ ಅನಾರೋಗ್ಯ ಕಾರಣ ವೆಂಕಟರಮಣಪ್ಪ ಕೆಲ ದಿನಗಳಿಂದ ಬೆಂಗಳೂರಿನ ಪೊರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

