ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚದ್ ಗೆಹ್ಲೊಟ್ ಅಂಗೀಕರಿಸಿದ್ದಾರೆ.
ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದರು. ಕಾರ್ಯನಿಮಿತ್ತ ಇಂದೋರ್ ಗೆ ತೆರಳಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದು, ಸಿದ್ದರಾಮಯ್ಯ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ತಮ್ಮ ವಿವೇಚನಾಧಿಕಾರ ಬಳಸಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುವುದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಸರ್ಜನೆಯಾದಂತಾಗಿದೆ. ನೂತನ ಮುಖ್ಯಮಂತ್ರಿ ಆಯ್ಕೆಯಾಗಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಉಸ್ತುವಾರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ.

