ಬೆಂಗಳೂರು: ಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರಿಂದ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ನೇಮಕ ಮಾಡುವುದು ಖಚಿತವಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸತೀಶ್ ಜಾರಕಿಹೊಳಿಗೆ ಕರೆ ಮಾಡಿ ಚರ್ಚೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಕೂಡ ನೀಡುವಂತೆ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಂದ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ನೇಮಕ ಮಾಡುವ ಬಗ್ಗೆ ಕಾಂಗ್ರೆಸ್ ಸೈಕಮಾಂಡ್ ಚರ್ಚೆ ನಡೆಸಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೂಡ ಈಗಾಗಲೇ ಸತೀಶ್ ಜಾರಕಿಹೊಳಿಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರು ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

