ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಸಿಎಂ ರಾಜೀನಾಮೆ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟವನ್ನು ವಿಸರ್ಜಿಸಲಾಗಿದೆ.
ಸಚಿವ ಸಂಪುಟ ವಿಸರ್ಜನೆ ಹಿನ್ನೆಲೆಯಲ್ಲಿ ಸಚಿವರುಗಳಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ವಾಪಸ್ ಪಡೆಯಲಾಗಿದೆ. ಹೀಗಾಗಿ ಮಾಜಿ ಸಚಿವರುಗಳು ಖಾಸಗಿ ಕಾರುಗಳಿಗೆ ಶಿಫ್ಟ್ ಆಗಿದ್ದಾರೆ. ಸರ್ಕಾರಿ ನಿವಾಸದ ನಾಮಫಲಕಗಳನ್ನು ಕೂಡ ತೆಗೆಯಲಾಗುತ್ತಿದೆ.
ಈಗಾಗಲೇ ಲೋಕೋಪಯೋಗಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದ ನಾಮಫಲಕಗಳನ್ನು ತೆಗೆಯಲಾಗಿದೆ. ನಿವಾಸಕ್ಕೆ ಹಾಕಿದ್ದ ನಾಮಫಲಕಕ್ಕೆ ಪೇಪರ್ ಅಂಟಿಸಿ ಮುಚ್ಚಲಾಗಿದೆ.

