ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸಚಿವ ಸಂಪುಟ ವಿಸರ್ಜನೆಯಾಗಿದೆ. ನೂತನ ಮುಖ್ಯಮಂತ್ರಿ ಪ್ರಮಾಣವಚನದ ಬಳಿಕ ನೂತನ ಸಚಿವ ಸಂಪುಟ ರಚನೆಯಾಗಲಿದೆ. ಸಚಿವಾಕಾಂಕ್ಷಿಗಳು ಹೊಸ ಸಂಪುಟ ಸೇರಲು ಕಸರತ್ತು ನಡೆಸಿದ್ದಾರೆ.
ದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ. ಸಿದ್ದರಾಮಯ್ಯ ಬಣದ ಮಾಜಿ ಸಚಿವ ಕೆ.ಎನ್. ರಾಜಣ್ಣ ಪುತ್ರ, ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಸಚಿವ ಸ್ಥಾನಕ್ಕಾಗಿ ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದ್ದಾರೆ. ಯೂತ್ ಕಾಂಗ್ರೆಸ್ ಅನುಭವ ಹೊಂದಿರುವ ಅವರು, ಎಸ್ಟಿ ಕೋಟಾದಡಿ ಸಚಿವಗಿರಿ ಪಡೆಯಲು ಇಂದು ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರು ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಲಾಬಿ ನಡೆಸಲಿದ್ದಾರೆ.
ಮತ್ತೊಂದೆಡೆ ಇತರ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಬೆಂಗಳೂರಿನಲ್ಲಿ ಇರುವಂತೆ ಸೂಚಿಸಲಾಗಿದೆ. ನಾಳೆ ನೂತನ ಮುಖ್ಯಮಂತ್ರಿ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಈ ನಡುವೆ ನೂತನ ಸಚಿವ ಸಂಪುಟ ಸೇರಲು ಸ್ಸಚಿವಾಕಾಂಕ್ಷಿಗಳು ಭಾರಿ ಕಸರತ್ತು ನಡೆಸುತ್ತಿದ್ದಾರೆ.

