HomeKarnatakaBIG NEWS: ಕೊಲೆ ಪ್ರಕರಣ: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅರೆಸ್ಟ್

BIG NEWS: ಕೊಲೆ ಪ್ರಕರಣ: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅರೆಸ್ಟ್

ಚಿತ್ರದುರ್ಗ: ಹಣ ಡಬ್ಲಿಂಗ್ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ್ ಅಲಿಯಾಸ್ ಕೋಟಾನೋಟ್ ಚಂದ್ರ ಬಂಧಿತ ಆರೋಪಿ. ಸಾವನ್ನಪ್ಪಿರುವ ವ್ಯಕ್ತಿ ಮಲ್ಲಿಕಾರ್ಜುನ (40) ಅವರಿಗೆ ಲೋನ್ ಕೊಡಿಸುವುದಾಗಿ ನಂಬಿಸಿ ಚಂದ್ರಶೇಖರ್ ವಂಚಿಸಿದ್ದ.
ಅದಲ್ಲದೆ, ಮಲ್ಲಿಕಾರ್ಜುನ ಅವರ ಬ್ಯಾಂಕ್ ಖಾತೆ ಮೂಲಕ ಹಣ ಡಬ್ಲಿಂಗ್ ದಂಧೆ ನಡೆಸಿದ್ದ. ಇದಾದ ಬಳಿಕ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮಲ್ಲಿಕಾರ್ಜುನ ಸಾಕ್ಷಿಯಾಗಿದ್ದರು. ಇದರಿಂದ ಸ್ವತಃ ಚಂದ್ರಶೇಖರ್ ಮಲ್ಲಿಕಾರ್ಜುನನ ಹತ್ಯೆಗೆ ಸಂಚು ರೂಪಿಸಿದ್ದ.

ಮೇ 1ರಂದು ಚಿತ್ರದುರ್ಗದ ಜಾನಕೊಂಡ ಸಮೀಪದ ತೋಟವೊಂದರ ಮನೆಯಲ್ಲಿ ಮಲ್ಲಿಕಾರ್ಜುನ ಸಾವನ್ನಪ್ಪಿದ್ದರು. ಘಟನೆಯ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಈ ಹಿಂದೆ ಏಪ್ರಿಲ್ 14 ರಂದು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ಚಿಕಿತ್ಸೆ ಪಡೆದು ಏಪ್ರಿಲ್ 18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಬಳಿಕ ಚಂದ್ರಶೇಖರ್‌ಗೆ ಸೇರಿದ್ದ ತೋಟದಲ್ಲಿ ಈತನನ್ನು ಅಕ್ರಮವಾಗಿ ಬಂಧನದಲ್ಲಿರಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂದ್ರಶೇಖರ್ ತನ್ನ ಅಕ್ರಮ ದಂಧೆ ಮುಚ್ಚಿ ಹಾಕಲು ತನ್ನ ಪತಿ ಮಲ್ಲಿಕಾರ್ಜುನ್ ಅವರನ್ನು ಹತ್ಯೆ ಮಾಡಿದ್ದಾಗಿ ಪತ್ನಿ ಆಶಾ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪತ್ನಿ ದೂರಿನಾಧಾರದ ಮೇಲೆ ಚಂದ್ರಶೇಖರ್ ಹಾಗೂ ಸದಾಶಿವ ನಾಯಕ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೊಂದಿಗೆ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿರುವ ಇನ್ನೋರ್ವ ಆರೋಪಿ ಚಂದ್ರಶೇಖರ್ ಪುತ್ರ ವಿನಾಯಕ್‌ಗೆ ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular