HomeKarnatakaBIG NEWS: ನೂತನ ಸಿಎಂ ಪದಗ್ರಹಣಕ್ಕೆ ಸಿದ್ಧತೆ: ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ

BIG NEWS: ನೂತನ ಸಿಎಂ ಪದಗ್ರಹಣಕ್ಕೆ ಸಿದ್ಧತೆ: ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿರುವ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ನಿರೀಕ್ಷೆಯಂತೆ ಡಿ.ಕೆ.ಶಿವಕುಮಾರ್ ಅವರನ್ನೇ ಶಾಸಕಾಂಗ ಪಕ್ಷದ ನಾಯಕನ್ನಾನಿ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಮುಂದುನ ಸಿಎಂ ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ಆರಂಭವಾಗಿವೆ. ವಿಧಾನಸೌಧದ ಮುಂಭಾಗ ಪ್ರಮಾಣವಚನ ಸ್ವೀಕಾರಕ್ಕೆ ತಯಾರಿ ನಡೆಯುತ್ತಿದೆ. ನೂತನ ಸಿಎಂ ಪ್ರದಗ್ರಹಣ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಜಂಟಿ ಆಯುಕ್ತರು ಹಾಗೂ ಡಿಸಿಪಿಗಳು ಭಾಗಿಯಾಗಿದ್ದು, ಡಿಪಿಎಆರ್ (DPAR) ಸೂಚನೆ ಮೇರೆಗೆ ಯಾವುದೇ ಸ್ಥಳದಲ್ಲಿ ಪದಗ್ರಹಣ ನಡೆದರೂ ಕಟ್ಟುನಿಟ್ಟಿನ ಭದ್ರತೆ ಒದಗಿಸಲು ಸಕಲ ಸಿದ್ಧತೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular