ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಕಸರತ್ತು ಆರಂಭವಾಗಿದ್ದು, ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ. ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ(CLP)ಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಈ ನಡುವೆ ಡಿ.ಕೆ.ಶಿವಕುಮಾರ್ ಸಿಎಲ್ ಪಿ ಸಭೆಗೂ ಮುನ್ನವೇ ರಾಜ್ಯಪಾಲರನ್ನು ಭೇತಿಯಾಗಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಡಿ.ಕೆ. ಶಿವಕುಮಾರ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ಸಿಎಲ್ ಪಿ ಸಭೆ ಸಂಜೆ ಇಂದು 4 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಮಧ್ಯಾಹ್ನ 1 ಗಂಟೆಯ ನಂತರ ರಾಜ್ಯಪಾಲರು ಧರ್ಮಸ್ಥಳಕ್ಕೆ ತೆರಳಲಿರುವ ಕಾರಣ, ಅವರು ಸಿಗುವುದಿಲ್ಲ. ಸಂಜೆ ಕೂಡ ರಾಜ್ಯಪಾಲರು ಅನುಪಸ್ಥಿತರಿರಲಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ ಸಿಎಲ್ ಪಿ ಸಭೆಗೂ ಮುನ್ನ ಲೋಕಹವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ರಾಜ್ಯಪಾಲರ ಬಳಿ ಎರಡು ದಿನಾಂಕವನ್ನು ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ಜೂನ್ 1 ಅಥವಾ ಜೂನ್ 5ರಂದು ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ.

