ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.
ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ನಿರೀಕ್ಷೆಯಂತೆ ಡಿ.ಕೆ.ಶಿವಕುಮಾಅರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಸಿಎಲ್ ಪಿ ಸಭೆಗೆ ನಾಲ್ವರು ಶಾಸಕರು ಗೈರಾಗುವ ಸಾಧ್ಯತೆಯಿ ಎನ್ನಲಾಗಿದೆ. ಅನಾರೋಗ್ಯದ ಕಾರಣದಿಂದ ಕಾಗವಾಡ ಶಾಸಕ ರಾಜು ಕಾಗೆ, ತಂದೆಯ ನಿಧನದ ಹಿನ್ನೆಲೆಯಲ್ಲಿ ಪಾವಗಡ ಶಾಸಕ ವೆಂಕಟೇಶ್, ಹಜ್ ಯಾತ್ರೆಯಲ್ಲಿರುವ ಕಾರಣ ರಹೀಮ್ ಖಾನ್ ಹಾಗೂ ಸದ್ಯ ವಿದೇಶ ಪ್ರವಾಸದಲ್ಲಿರುವ ಕೆ.ಎನ್. ರಾಜಣ್ಣ ಸಭೆಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

