HomeKarnatakaSHOCKING : ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ ಮೆರೆದ ಮುನೀರ್ ;...

SHOCKING : ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ ಮೆರೆದ ಮುನೀರ್ ; ಕಠಿಣ ಕ್ರಮಕ್ಕೆ ಮಹಿಳಾ ಆಯೋಗ ಆದೇಶ

ಬೆಂಗಳೂರು :   ಬೀದರ್‌ನ  ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ತೆಗೆದು ವಿಕೃತಿ ಮೆರೆದಿರುವ ಆಟೆಂಡರ್ ಮುನೀರ್ ಅಹಮದ್‌ನ ಅಮಾನುಷ ಕೃತ್ಯ ಇಡೀ ಸಮಾಜ ತಲೆತಗ್ಗಿಸುವಂತದ್ದಾಗಿದೆ.

ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. , ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ, ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ಶೂಟ್ ಮಾಡಿ ವಿಕೃತಿ ಮೆರೆದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸಾವಿನ ನಂತರವೂ ಮಹಿಳೆಯರ ಘನತೆಗೆ ಧಕ್ಕೆ ತಂದಿರುವ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇನೆ. ಈ ಕೂಡಲೇ ನಿಯಮಾನುಸಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಈ ಕುರಿತು ಶೀಘ್ರವೇ ಆಯೋಗಕ್ಕೆ ವರದಿ ಸಲ್ಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರದ ಮೂಲಕ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದೇನೆ  ಎಂದು ಮಹಿಳಾ ಆಯೋಗದ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏನಿದೆ ಸುತ್ತೋಲೆಯಲ್ಲಿ..?

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ, ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ಶೂಟ್ ಮಾಡಿ ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿರುತ್ತದೆ.

ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಮುನೀರ್ ಅಹಮದ್ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular