HomeKarnatakaBREAKING: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ

BREAKING: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಪ್ಪಿಗೆ ನೀಡಿದ್ದು, ನೂತನ ಶಾಸಕಾಂಕ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಡಿ.ಕೆ.ಶಿವಕುಮಾರ್ ಆಯ್ಕೆಗೆ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದು, ಇದಕ್ಕೆ ಡಾ.ಜಿ.ಪರಮೇಶ್ವರ್ ಅನುಮೋದನೆ ನೀಡಿದ್ದಾರೆ. ಕೆಲವೇ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಲೋಕಭವನಕ್ಕೆ ತೆರಳಿದ್ದು, ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular