HomeLatest NewsBREAKING: ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿ.ಕೆ.ಶಿವಕುಮಾರ್

BREAKING: ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಒಕ್ಕೋರಲಿನಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಲೋಕಭವನಕ್ಕೆ ತೆರಳಿದ ಡಿ.ಕೆ.ಶಿವಕುಮಾರ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಿಎಲ್ ಪಿ ಸಭೆಯಲ್ಲಿ ಆಯ್ಕೆಯಾದ ಬಗ್ಗೆ ಪತ್ರ ನೀಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 3ರಂದು ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಕರ್ನಾಟಕ ಕಾಂಗ್ರೆಸ್ ನ ಹೊಸ ಅಧ್ಯಾಯ ಆರಂಭವಾದಂತಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular