HomeKarnatakaBREAKING: ನಿರ್ವಹಣಾ ಕಾಮಗಾರಿ ಯಶಸ್ವಿ, ಮೆಟ್ರೋ ಸೇವೆ ನೇರಳೆ ಮಾರ್ಗದಲ್ಲಿ ಸಂಪೂರ್ಣ ಲಭ್ಯ

BREAKING: ನಿರ್ವಹಣಾ ಕಾಮಗಾರಿ ಯಶಸ್ವಿ, ಮೆಟ್ರೋ ಸೇವೆ ನೇರಳೆ ಮಾರ್ಗದಲ್ಲಿ ಸಂಪೂರ್ಣ ಲಭ್ಯ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ಮೆಟ್ರೋ ರೈಲು ಸೇವೆಗಳು ಇಂದು ಬೆಳಿಗ್ಗೆ 07:00 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಲಭ್ಯವಿರುತ್ತವೆ. ಪ್ರಯಾಣಿಕರು ಈ ಮಾಹಿತಿಯನ್ನು ಗಮನಿಸಿ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಲಾಗಿದೆ.

ಈ ಮೊದಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿತ್ತು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ವು ನೇರಳೆ ಮಾರ್ಗದಲ್ಲಿನ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 31ನೇ ಮೇ 2026 (ಭಾನುವಾರ) ರಂದು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ನಿರ್ವಹಿಸುವ ಉದ್ದೇಶದಿಂದ, ನೇರಳೆ ಮಾರ್ಗದಲ್ಲಿನ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸಂಚಾರವನ್ನು ಬೆಳಿಗ್ಗೆ 07:00 ಗಂಟೆಯಿಂದ 09:00 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಲಾಗಿತ್ತು

ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ ಸೇವೆ ಲಭ್ಯವಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular