ರಾಮನಗರ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ.
ಪತಿ ಮಹಾಶಯ, ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಾಗಮ್ಮ (40) ಪತಿಯಿಂದ ಕೊಲೆಯಾದ ಪತ್ನಿ. ಕಣಿ ಮಾದಯ್ಯ ಪತ್ನಿಯನ್ನೇ ಹತ್ಯೆಗೈದ ಪತಿ. ಕಟ್ಟಿ ಎಂಬಾತನ ಜೊತೆ ನಾಗಮ್ಮ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಷಯ ತಿಳಿದ ಕಣಿ ಮಾದಯ್ಯ, ಪತ್ನಿಯನ್ನೇ ಕೊಲೆ ಮಾಡಿದ್ದಾನೆ.
ಅಲ್ಲದೇ ಪತ್ನಿಯ ಪ್ರಿಯಕರ ಕಟ್ಟಿ ಮೇಲೂ ಹಲ್ಲೆ ನಡೆಸಿದ್ದಾನೆ. ಗಾಯಾಳು ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

