ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಜಾರಿ ನಿರ್ದೇಶನಾಲಯ (ED) ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಎರಡನೇ ಬಾರಿ ಸಮನ್ಸ್ ಜಾರಿ ಮಾಡಿದೆ.
ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. ಶುಕ್ರವಾರ ವಿಚಾರಣೆಗೆ ಹಾಜರಾಗಿವಂತೆ ಈ ಹಿಂದೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ರಾಜಕೀಯ ಬೆಳವಣಿಗೆಗಳಿಂದಾಗಿ ವಿಚಾರಣೆಗೆ ವಿನಾಯಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಳೆ ಜೂನ್ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಬಿಟ್ ಕಾಯಿನ್ ಹಗರಣದಲ್ಲಿ ಈಗಾಗಲೇ ಕಿಂಗ್ ಪಿನ್ ಶ್ರೀಕಿ ಅಲಿಯ್ತಾಸ್ ಶ್ರಿಕೃಷ್ಣ ಸೇರಿದಂತೆ ಮೂವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

