HomeKarnatakaBIG NEWS: ಡಿ.ಕೆ.ಶಿವಕುಮಾರ್ ಸಿಎಂ ಆಗಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಫುಲ್ ಖುಷಿಯಾಗಿದೆ: ಶಾಸಕ ಯತ್ನಾಳ್ ಹೀಗಂದಿದೇಕೆ?

BIG NEWS: ಡಿ.ಕೆ.ಶಿವಕುಮಾರ್ ಸಿಎಂ ಆಗಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಫುಲ್ ಖುಷಿಯಾಗಿದೆ: ಶಾಸಕ ಯತ್ನಾಳ್ ಹೀಗಂದಿದೇಕೆ?

ವಿಜಯಪುರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿ.ವಿಜಯೇಂದ್ರಗೆ ಫುಲ್ ಖುಷಿಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಡಿ.ಕೆ.ಶಿವಕುಮಾರ್ ಸಿಎಂ ಆಗಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಖುಷಿಯಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೆ ಮೊದಲು ಫೋನ್ ಮಾಡಿ ಶುಭ ಕೋರಿದ್ದೇ ವಿಜಯೇಂದ್ರ. ತಂದೆ ಫ್ರೆಂಡ್ ಹೋದರು, ನನ್ನ ಪಾರ್ಟ್ನರ್ ಬಂದ್ರು ಎಂದು ಖುಷಿಯಾಗಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿ ಸಿಎಂ ಆಗಿದ್ದಕ್ಕೆ ಮುಸ್ಲಿಂರು ಸಂಭ್ರಮಿಸುತ್ತಿದ್ದಾರೆ. ಸಿದ್ದರಾಮಯ್ಯ ಮುಸ್ಲಿಂರಿಗಾಗಿ ಬಹಳ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರನ್ನು ಕೆಳಗಿಳಿಸಿದ ಬಳಿಕ ಒಬ್ಬ ಮುಸ್ಲಿಂರು ಕೂಡ ವಿರೋಧಿಸಲಿಲ್ಲ. ಹಿಂದೂಗಳು ಯಾವತ್ತೂ ಸಿದ್ದರಾಮಯ್ಯನವರ ಬಗ್ಗೆ ಹೀನಾಯವಾಗಿ ಮಾತನಾಡಿಲ್ಲ. ಸೈದ್ಧಾಂತಿಕವಾಗಿ ಎಷ್ಟೇ ವಿರೋಧಿಸಿದರೂ ವೈಯಕ್ತಿಕವಾಗಿ ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular