HomeKarnatakaಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ

ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ

ಶಿವಮೊಗ್ಗ: ವೃದ್ಧರೊಬ್ಬರು ತನ್ನದೇ ಗನ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ತಟ್ಟೆಕೊಡ್ಲು ಎಂಬಲ್ಲಿ 85ವರ್ಷದ ವೃದ್ಧರೊಬ್ಬರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ರಾಮಚಂದ್ರ ರಾವ್ (85) ಆತ್ಮಹತ್ಯೆ ಮಾಡಿಕೊಂಡವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮಚಂದ್ರ ಅವರು ತಮ್ಮ ಮನೆಯ ಕೋಣೆಯಲ್ಲಿ ತಮ್ಮದೇ ಲೈಸನ್ಸ್ ಗನ್​ನಿಂದ ಗುಂಡು ಹಾರಿಸಿಕೊಂಡು ಸಾಅವನ್ನಪ್ಪಿದ್ದಾರೆ. ಗುಂಡು ಹಾರಿಸಿಕೊಂಡ ಪರಿಣಾಮ ತಲೆ ಸಂಪೂರ್ಣ ಛಿದ್ರಗೊಂಡಿದೆ.

ಮೃತ ರಾಮಚಂದ್ರ ಅವರು ಮೂರು ದಿನಗಳ ಹಿಂದೆ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ನಂತರ ಇವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ, ನೋವು ಕಡಿಮೆಯಾಗಿರಲಿಲ್ಲ. ಅತೀವ ನೋವಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ‌ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಗನ್​ಗೆ ಲೈಸೆನ್ಸ್ ಇತ್ತೆ ಎನ್ನುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular