HomeKarnatakaBREAKING: 5 ಸಾವಿರ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ...

BREAKING: 5 ಸಾವಿರ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ

ಬೆಂಗಳೂರು: ಬೆಂಗಳೂರಿನಲ್ಲಿ ಸರ್ಕಾರಿ ವಕೀಲೆಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. 5 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸರ್ಕಾರಿ ವಕೀಲೆ ಸವಿತಾ ನವೀನ್ ಪಾಟೀಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಸವಿತಾ ನವೀನ್ ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ನ ಸರ್ಕಾರಿ ವಕೀಲೆ. ಅತ್ಯಾಚಾರ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ದೂರುದಾರರಿಂದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಚೇರಿಯಲ್ಲಿಯೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ವಕೀಲೆ ಸವಿತಾ ನವೀನ್ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular