HomeKarnatakaBIG NEWS: ದೇವೇಗೌಡರು, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ: ಸುರೇಶ್ ಗೌಡ ಎಚ್ಚರಿಕೆ

BIG NEWS: ದೇವೇಗೌಡರು, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ: ಸುರೇಶ್ ಗೌಡ ಎಚ್ಚರಿಕೆ

ಮಂಡ್ಯ: ಡಿ.ಕೆ.ಶಿವಕುಮಾಅರ್ ಮುಖ್ಯಮಂತ್ರುಯಾಗಿದ್ದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಎಂದು ವ್ಯಂಗ್ಯವಾಡಿದ್ದ ಚಲುವರಾಯಸ್ವಾಮಿ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸುರೇಶ್ ಗೌಡ, ಅಧಿಕಾರ, ಹಣ, ಮದದಿಂದ ಚಲುವರಾಯಸ್ವಾಮಿ ತಪ್ಪು ಮಾಡುತ್ತಿದ್ದಾರೆ. ಅವರು ಯಾರ ಸಾವನ್ನು ಬಯಸುತ್ತಿದ್ದಾರೆ? ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಮತ್ತು ಹೆಚ್​​ಡಿ ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಡಿ.ಕೆ ಶಿವಕುಮಾರ್​​ ಸಿಎಂ ಆಗುತ್ತಿರುವುದರಿಂದ ದೇವೇಗೌಡರ ಮನೆಯಲ್ಲಿ ಸೂತಕ ಎಂಬ‌ ಸಚಿವ ಚಲುವರಾಯಸ್ವಾಮಿ ಹೇಳಿಕೆ‌ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್​ ನಾಯಕರು ಕೆಂಡಾಮಂಡಲರಾಗಿದ್ದಾರೆ. ಈ ವಿಚಾರವಾಗಿ ಮಾತನಾಡಿದವರು ಸುರೇಶ್ ಗೌಡ, ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. 5 ವರ್ಷ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕುಂಠಿತದ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದಕ್ಕೆ ಡಿ.ಕೆ ಶಿವಕುಮಾರ್​ ಸಿಎಂ ಆಗಿದ್ದಾರೆ. ಕೆಲವು ಕಿಡಿಗೇಡಿಗಳು ಯಾರನ್ನೋ ಮೆಚ್ಚಿಸಲು ನಮ್ಮ ನಾಯಕರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಬಂದಿದೆ ಅಂತ ಹೇಳುತ್ತಾರೆ. ಸಾವಿನ ಸಂದರ್ಭದಲ್ಲಿ ಮಾತ್ರ ಸೂತಕ ಬರುವುದು. ಚಲುವರಾಯಸ್ವಾಮಿ ಯಾರ ಸಾವನ್ನು ಬಯಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಲುವರಾಯಸ್ವಾಮಿಗೆ ಯಾವ ರೀತಿ ಬುದ್ಧಿ ಹೇಳಬೇಕು. ದೇವೇಗೌಡರ ಇತಿಹಾಸ ನಿಮಗೆ ಏನು ಗೊತ್ತು. ಕನ್ನಡನಾಡಿನಲ್ಲಿ ಪ್ರಧಾನಿಯಾದ ಒಬ್ಬ ಕನ್ನಡಿಗ ಅಂದರೆ ದೇವೇಗೌಡರು. ಎಸ್ ಎಂ ಕೃಷ್ಣ ಅವರನ್ನು ಸಿಎಂ ಮಾಡಿದ್ದು ಯಾರು? ಇವಾಗ ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿ ಆದರೆ ದೇವೇಗೌಡರಿಗೆ ಹೊಟ್ಟೆ ಉರಿನಾ? ಬಿಜೆಪಿ ಜೊತೆ ಎನ್​​ಡಿಎ ಸರ್ಕಾರ ಇದೆ. ಕಾಂಗ್ರೆಸ್ ಪಕ್ಷದಿಂದ ಯಾರೇ ಸಿಎಂ ಆದರೂ ನಮ್ಮ ವಿರೋಧವೆ. ವಿರೋಧ ಪಕ್ಷದ ಕೆಲಸ ವಿರೋಧ ಮಾಡುವುದೆ ಎಂದಿದ್ದಾರೆ.

ಅಧಿಕಾರ ಶಾಶ್ವತ ಅಲ್ಲ, ಚುನಾವಣೆ ಬುರುತ್ತೆ ಬುದ್ದಿ ಕಲಿಸುತ್ತಾರೆ. ದೇವೇಗೌಡರ ಬಗ್ಗೆ ಮಾತನಾಡಿ ಲೀಡರ್ ಆಗುತ್ತೇನೆ ಎನ್ನುವ ಭ್ರಮೆಯಲ್ಲಿದ್ದಾರೆ. ನಿನ್ನ ಬಳಿ ಅಧಿಕಾರ ಇರಬಹುದು ಜನರ ಶಕ್ತಿ ನಮ್ಮ ಬಳಿ ಇದೆ. ಚಲುವರಾಯಸ್ವಾಮಿಗೆ ಯಾರ ಮನೆಯಲ್ಲಿ ಸಾಯುತ್ತಾರೆ ಎನ್ನುವುದು ಮುನ್ಸೂಚನೆ ಗೊತ್ತಾಗುತ್ತೆ. ಮಾಟ- ಮಂತ್ರ ಮಾಡಿಸುವುದರಲ್ಲಿ ಎತ್ತಿದ ಕೈ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular