HomeKarnatakaಕೈ ಕಾಲು ಕತ್ತರಿಸುವ ಶಿಕ್ಷೆ ವಿಧಿಸುವಂತಾದರೆ ಜನರು ಕಾನೂನು ಪಾಲಿಸುತ್ತಾರೆನೋ: ಹೈಕೋರ್ಟ್ ನ್ಯಾ.ಆರ್. ನಟರಾಜ್

ಕೈ ಕಾಲು ಕತ್ತರಿಸುವ ಶಿಕ್ಷೆ ವಿಧಿಸುವಂತಾದರೆ ಜನರು ಕಾನೂನು ಪಾಲಿಸುತ್ತಾರೆನೋ: ಹೈಕೋರ್ಟ್ ನ್ಯಾ.ಆರ್. ನಟರಾಜ್

ಬೆಂಗಳೂರು: ಮಧ್ಯ ಪ್ರಾಚ್ಯ ದೇಶಗಳ ರೀತಿಯಲ್ಲಿ ಭಾರತದಲ್ಲಿಯೂ ಕೈಕಾಲು ಕತ್ತರಿಸುವ ಶಿಕ್ಷೆ ಇದ್ದರಷ್ಟೇ ಜನರು ಕಾನೂನು ಪಾಲಿಸುತ್ತಾರೆನೋ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಆರ್. ನಟರಾಜ್ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ರಜಾ ಕಾಲದ ಏಕ ಸದಸ್ಯ ನ್ಯಾಯ ಪೀಠದಲ್ಲಿದ್ದ ಅವರು ಅತ್ಯಾಚಾರ ಆರೋಪದಡಿ ಬಂಧಿತನಾಗಿರುವ ತೆಲಂಗಾಣದ 23 ವರ್ಷದ ಯುವಕ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ರೀತಿ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ, ಆರೋಪಿತ ಯುವಕನಿಗೆ ಜಾಮೀನು ನಿರಾಕರಿಸಿದ್ದಾರೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಅಪರಾಧ ಎಸಗುವುದು ಸಲೀಸಾಗಿಬಿಟ್ಟಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ ಇರುವ ಕಾರಣ ನಮ್ಮ ಕಾನೂನುಗಳು ಹಲ್ಲು ಕಳೆದುಕೊಂಡಿವೆ. ಬಹುಶಃ ಮಧ್ಯಪ್ರಾಚ್ಯ ದೇಶಗಳಲ್ಲಿ ನೀಡಲಾಗುವ ಕಠಿಣ ಶಿಕ್ಷೆಯನ್ನು ನಮ್ಮಲ್ಲಿಯೂ ತಪ್ಪಿತಸ್ಥರಿಗೆ ನೀಡುವಂತಾದರೆ ನಮ್ಮ ಜನ ತಕ್ಕ ರೀತಿಯಲ್ಲಿ ಕಾನೂನು ಪಾಲಿಸುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ಅರ್ಜಿದಾರ ನಾಲ್ಕೈದು ದಿನ ಜೈಲಿನಲ್ಲಿರಲಿ ಬಿಡಿ. ಜೈಲಿನ ಅನುಭವವಾಗಲಿ ಎಂದು ನ್ಯಾಯಮೂರ್ತಿಗಳು ಹೇಳಿದ್ದು, ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular