HomeKarnatakaಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ: 13 ಆರೋಪಿಗಳು ಅರೆಸ್ಟ್

ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ: 13 ಆರೋಪಿಗಳು ಅರೆಸ್ಟ್

ಬೆಳಗಾವಿ: ಕಂಟ್ರಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ಠಾಣೆ ಪೊಲಿಸರು ಬೇಧಿಸಿದ್ದಾರೆ. 13 ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು ಗೊತ್ತಾಗಿತ್ತು. ಬಳಿಕ ಕಂಟ್ರಿ ಪಿಸ್ತೂಲ್ ಮೂಲ ಬೆನ್ನು ಹತ್ತಿದ ಪೊಲೀಸರಿಗೆ ಖಾನಾಪುರದ ಕಾಟಗಾಳಿ ಗ್ರಾಮದಲ್ಲಿ ಆರೋಪಿಗಳು 2024ರಿಂದ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿರುವ ಅಂಶ ಬೆಳಕಿಗೆ ಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಮಾರುತಿ ಸಿಂಗಲ್ ಲೋಡೆಡ್, ಡಬಲ್ ಲೋಡೆಡ್ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದು, ಇವುಗಳ ತಯಾರಿಕೆಗೆ ಆರೋಪಿ ಮರಿಯಪ್ಪ ನಾಯಕ ಹಣ ಕೊಡುತ್ತಿದ್ದ. ಇನ್ನೋರ್ವ ಆರೋಪಿ ವಿಶ್ವನಾಥ ದೇಸಾಯಿ ಬಂದೂಕಿನ ಬಿಡಿಭಾಗಗಳನ್ನ ಪೂರೈಸುತ್ತಿದ್ದ. ಜೊತೆಗೆ ಬುಕ್ ಸ್ಟಾಲ್‌ನಲ್ಲಿ ಬಂದೂಕಿನ ಬಿಡಿಭಾಗಗಳು ಮತ್ತು ಮದ್ದುಗುಂಡುಗಳನ್ನು ಮಾರಾಟ ಮಾಡಿದ್ದ.

ಈತನಿಂದ ಬಂದೂಕಿನ 21 ಟ್ರೀಗರಗಳು, 5 ಹೆಡ್‌ಗಳು, 15 ನಿಪ್ಪಲಗಳು, 1 ಸಿಲಿಂಗ್ ಬೆಲ್ಟ್, 34 ಮದ್ದು ತುಂಬಿದ ಪ್ಯಾಕೇಟ್, 499 ಸೀಸಿನ ಗೋಲಿಗಳು, 420 ಕೇಪಗಳು, 48 ಜೀವಂತ ಕಾಡತೂಸುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸದ್ಯ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದು, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದ 8 ಕಂಟ್ರಿ ಪಿಸ್ತೂಲ್ ಸೇರಿ ಒಟ್ಟು 9 ಕಂಟ್ರಿ ಪಿಸ್ತೂಲ್ ಜಪ್ತಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular