HomeKarnatakaಲಾಡ್ಲೆ ಮಶಾಕ್ ದರ್ಗಾ ವಿವಾದ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಲಾಡ್ಲೆ ಮಶಾಕ್ ದರ್ಗಾ ವಿವಾದ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.

ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ದೂರು ಸಲ್ಲಿಸಿದೆ.

ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಿದೆ. ಈ ನಿರ್ಧಾರವನ್ನು ರದ್ದುಗೊಳಿಸಲು ಸರ್ಕಾರಕ್ಕೆ ಸೂಚಿಸುವಂತೆ ಬಿಜೆಪಿ ಆಯೋಗ ತನ್ನ ದೂರಿನ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದೆ. ಜೊತೆಗೆ ಕೇಸ್ ವಾಪಸ್ ಪಡೆದ ನಿರ್ಣಯ ರದ್ದುಪಡಿಸಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಹಿಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಲಾಡ್ಲೆ ಮಶಕ್ ದರ್ಗಾದಲ್ಲಿ 2022 ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ತೀರ್ಮಾನ ಕೈಗೊಂಡಿದೆ. ಇದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು, ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular