ಬೆಂಗಳೂರು: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡುವುದು ಖಚಿತವಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಮೊದಲಿನಿಂದಲೂ ಕಣ್ಣಿಟ್ಟಿದ್ದ ಸತೀಶ್ ಜಾರಕಿಹೊಳಿಗೆ ಅಧ್ಯಕ್ಷ ಪಟ್ಟ ಕೈತಪ್ಪಿದೆ. ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಗಾದಿ ಕೈತಪ್ಪಿದೆ. ಕಾಂಗ್ರೆಸ್ ಹೈಕಮಾಂಡ್ ಬಿ.ಕೆ.ಹರಿಪ್ರಸಾದ್ ಅವರನ್ನು ಕೆಪಿಸಿಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಹೈಕಾಮಂಡ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಎಂಎಲ್ ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

