HomeKarnatakaBIG NEWS: ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ ಶುಭ ಕೋರಿದ ಸೋನಿಯಾ ಗಾಂಧಿ

BIG NEWS: ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ ಶುಭ ಕೋರಿದ ಸೋನಿಯಾ ಗಾಂಧಿ

ಬೆಂಗಳೂರು: ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 4.5ಕ್ಕೆ ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು.

ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಶುಭಾಶಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ 13 ಸಚಿವರು:


ಸಿದ್ದರಾಮಯ್ಯ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಂಜೆ 4:05ಕ್ಕೆ ಲೋಕಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನೆಡೆಯಲಿದ್ದು, ಡಿ.ಕೆ.ಶಿವಕುಮಾರ್ ಜೊತೆಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕ ಹಿರಿಯ ಸಚಿವರಿಗೆ ಡಿ.ಕೆ.ಶಿವಕುಮಾರ್ ಮಂತ್ರಿ ಮಂಡಲದಲ್ಲಿಯೂ ಸ್ಥಾನ ನೀಡಲಾಗಿದೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಕರೆ ಮಾಡಿ ಸಂಜೆ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. 13 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಯತೀಂದ್ರ ಸಿದ್ದರಾಮ್ಯ
ಡಾ.ಜಿ.ಪರಮೇಶ್ವರ್
ಕೆ.ಹೆಚ್.ಮುನಿಯಪ್ಪ
ಕೆ.ಜೆ.ಜಾರ್ಜ್
ಕೃಷ್ಣಬೈರೇಗೌಡ
ಎಂ.ಬಿ.ಪಾಟೀಲ್
ಪ್ರಿಯಾಂಕ್ ಖರ್ಗೆ
ರಾಮಲಿಂಗಾರೆಡ್ಡಿ
ದಿನೇಶ್ ಗುಂಡೂರಾವ್
ಭೈರತಿ ಸುರೇಶ್
ಹೆಚ್.ಕೆ.ಪಾಟೀಲ್ ಅಥವಾ ಈಶ್ವರ್ ಖಂಡ್ರೆ
ಶರಣಪ್ರಕಾಶ್ ಪಾಟೀಲ್
ಸತೀಶ್ ಜಾರಕಿಹೊಳಿ
ಯು.ಟಿ.ಖಾದರ್ ಸೇರಿದಂತೆ ಮೊದಲ ಹಂತದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular