HomeKarnatakaBREAKING: ಡಿ.ಕೆ.ಶಿವಕುಮಾರ್ ಪ್ರಮಾಣವಚನ: 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ

BREAKING: ಡಿ.ಕೆ.ಶಿವಕುಮಾರ್ ಪ್ರಮಾಣವಚನ: 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 4:05ಕ್ಕೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ವೀಕ್ಷಿಸಲು 230 ಬಸ್ ನಿಲ್ದಾಣಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯದ ಜನತೆ, ಸಾರ್ವಜನಿಕರು ವೀಕ್ಷಲು ವಾರ್ತಾ ಇಲಾಖೆಯು ‘ವೃತ್ತಿ ಸೊಲ್ಯೂಷನ್ಸ್’ ಸಹಯೋಗದಲ್ಲಿ ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಿದೆ. ಇದರಿಂದಾಗಿ ಪ್ರಯಾಣಿಕರು ಹಾಗೂ ಸಾಮಾನ್ಯ ಜನರು ಬಸ್ ನಿಲ್ದಾಣಗಳಲ್ಲೇ ಉಚಿತವಾಗಿ ಕಾರ್ಯಕ್ರಮ ಕಣ್ತುಂಬಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅವರೊಂದಿಗೆ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಇನ್ನುಳಿಂದತೆ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಡಿ.ಕೆ.ಶಿವಕುಮಾರ್​ -ಸಿಎಂ, ಡಾ.ಜಿ.ಪರಮೇಶ್ವರ್-ಡಿಸಿಎಂ, ಸತೀಶ್​​ ಜಾರಕಿಹೊಳಿ, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್​​ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್​, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್​, ಶರಣಪ್ರಕಾಶ್ ಪಾಟೀಲ್ ಹೆಸರು ಮೊದಲ ಪಟ್ಟಿಯಲ್ಲಿ​ದೆ. ಇನ್ನು ಮೊದಲ ಪಟ್ಟಿಯಲ್ಲಿ ಹಲವು ಘಟಾನುಘಟಿ ನಾಯಕರಿಗೆ ಸ್ಥಾನ ಸಿಕ್ಕಿಲ್ಲ.

ಒಕ್ಕಲಿಗರ ಕೋಟಾದಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಮೂವರಿಗೆ ಸ್ಥಾನ ನೀಡಲಾಗಿದ್ದರೆ, ಲಿಂಗಾಯತ ಕೋಟಾದಲ್ಲಿ ಮೂವರು, ದಲಿತ ಕೋಟಾದಡಿ ಪರಮೇಶ್ವರ್ ಸೇರಿ ಮೂವರು, ಕುರುಬ ಸಮುದಾಯದಡಿ ಇಬ್ಬರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ಇನ್ನು ಎಸ್​​ಟಿ, ಮುಸ್ಲಿಮ್, ಕ್ರಿಶ್ಚಿಯನ್​​ ಕೋಟಾದಡಿ ತಲಾ ಒಬ್ಬರಿಗೆ ಸ್ಥಾನ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular