HomeKarnatakaಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ: ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರ ವ್ಯಜ್ತಪಡಿಸಿದ ಹೆಚ್.ಕೆ.ಪಾಟೀಲ್

ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ: ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರ ವ್ಯಜ್ತಪಡಿಸಿದ ಹೆಚ್.ಕೆ.ಪಾಟೀಲ್

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಹೆಚ್.ಕೆ.ಪಾಟೀಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮಹಾಜನತೆ, ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಮತ್ತು ಅಭಿಮಾನಕ್ಕೆ ನಾನು ಸದಾ ಚಿರಋಣಿ. ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ. ಹೈಕಮಾಂಡ್ ನಿರ್ಧಾರಕ್ಕೆ ಒಪ್ಪೋಣ ಎಂದು ಬರೆದುಕೊಂಡಿದ್ದು, ಇದು ಸಚಿವ ಸ್ಥಾನ ಕೈತಪ್ಪಿದ ನೋವಿನ ಅಭಿವ್ಯಕ್ತಿಯೇ ಎಂಬ ಚರ್ಚೆಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್‌ನ ಹಿರಿಯ ನಾಯಕರಾಗಿ, ಆಡಳಿತ ಮತ್ತು ಸಂಘಟನೆಯಲ್ಲಿ ಅಪಾರ ಅನುಭವ ಹೊಂದಿರುವ ಹೆಚ್.ಕೆ. ಪಾಟೀಲ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇಲ್ಲದಿರುವುದು ಬೆಂಬಲಿಗರಲ್ಲಿ ನಿರಾಸೆ ಮೂಡಿಸಿದೆ.

“ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣ” ಎಂಬ ಹೆಚ್.ಕೆ.ಪಾಟೀಲ್ ಅವರ ಸಾಲು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಪಕ್ಷದ ತತ್ವಗಳಿಗೆ ಬದ್ಧವಾಗಿ ಕೆಲಸ ಮಾಡಿದವರಿಗೆ ಕೆಲವೊಮ್ಮೆ ಸೂಕ್ತ ಮಾನ್ಯತೆ ದೊರೆಯುವುದಿಲ್ಲ ಎಂಬ ಅಂತರಾಳದ ನೋವನ್ನು ಅವರು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಆದರೆ ಮತ್ತೊಂದೆಡೆ, ’ಹೈಕಮಾಂಡ್ ನಿರ್ಧಾರಕ್ಕೆ ಒಪ್ಪೋಣ’ ಎಂದು ಹೇಳುವ ಮೂಲಕ ಪಕ್ಷದ ನಾಯಕತ್ವದ ವಿರುದ್ಧ ಯಾವುದೇ ಬಹಿರಂಗ ಅಸಮಾಧಾನ ವ್ಯಕ್ತಪಡಿಸದೇ, ಶಿಸ್ತು ಮತ್ತು ನಿಷ್ಠೆಯ ಸಂದೇಶವನ್ನೂ ಅವರು ರವಾನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular