HomeLatest NewsBIG NEWS : ವಿಧಾನಸೌಧದ 'CM' ಕಚೇರಿಯಲ್ಲಿ ಹೊಸ ಯುಗ : ಡಿ.ಕೆ. ಶಿವಕುಮಾರ್ ಹೆಸರಿನ...

BIG NEWS : ವಿಧಾನಸೌಧದ ‘CM’ ಕಚೇರಿಯಲ್ಲಿ ಹೊಸ ಯುಗ : ಡಿ.ಕೆ. ಶಿವಕುಮಾರ್ ಹೆಸರಿನ ನಾಮಫಲಕ ಅಳವಡಿಕೆ !

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದು, ಬೆನ್ನಲ್ಲೇ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹೊಸ ಬದಲಾವಣೆ ಕಂಡುಬಂದಿದೆ.

ಕರ್ನಾಟಕ ರಾಜ್ಯದ ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 3, 2026) ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು.ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.ಡಿ.ಕೆ. ಶಿವಕುಮಾರ್ ಅವರು ದಿವಂಗತ ಸಂತ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

ಕಚೇರಿಯ ಪ್ರವೇಶ ದ್ವಾರದಲ್ಲಿ ಇದ್ದ ನಾಮಫಲಕವನ್ನು ಬದಲಿಸಿ, ಇದೀಗ ‘ಡಿ.ಕೆ. ಶಿವಕುಮಾರ್ – ಮುಖ್ಯಮಂತ್ರಿ, ಕರ್ನಾಟಕ ಸರ್ಕಾರ’ ಎಂಬ ನಾಮಫಲಕವನ್ನು ಅಳವಡಿಸಲಾಗಿದೆ. ಕಚೇರಿಯ ನಾಮಫಲಕ ಬದಲಾವಣೆಯು ಹೊಸ ಆಡಳಿತದ ಆರಂಭವನ್ನು ಅಧಿಕೃತಗೊಳಿಸಿದೆ. ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಈ ಪ್ರಕ್ರಿಯೆ ನಡೆದಿದೆ. ಮುಖ್ಯಮಂತ್ರಿಯೊಂದಿಗೆ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ. ಜಿ. ಪರಮೇಶ್ವರ್ ಅವರು ನೂತನ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರು ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರದಂತೆ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಹಲವು ವರ್ಷಗಳ ರಾಜಕೀಯ ಹೋರಾಟ ಮತ್ತು ಪಕ್ಷ ಸಂಘಟನೆಯಲ್ಲಿನ ಅವರ ನಿರಂತರ ಸೇವೆಯ ಫಲವಾಗಿ ಇಂದು ಅವರು ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ‘ಟ್ರಬಲ್ ಶೂಟರ್’ ಖ್ಯಾತಿಯ ಡಿಕೆಶಿ ಅವರ ನೇತೃತ್ವದಲ್ಲಿ ರಾಜ್ಯದ ಆಡಳಿತ ಹೇಗೆ ಸಾಗಲಿದೆ ಎಂಬ ಕುತೂಹಲ ಸಾರ್ವಜನಿಕರಲ್ಲಿ ಮನೆಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular