HomeLatest Newsಸಿದ್ದು ಪರಮಾಪ್ತ ಸೇರಿ ವಿಧಾನಪರಿಷತ್ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್

ಸಿದ್ದು ಪರಮಾಪ್ತ ಸೇರಿ ವಿಧಾನಪರಿಷತ್ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್

ಬೆಂಗಳೂರು: ಇದೇ ತಿಂಗಳ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಮತ್ತು ತಿಪ್ಪಣ್ಣಪ್ಪ ಕಮಕನೂರ್ ಅವರುಗಳಿಗೆ ಮತ್ತೊಂದು ಅವಧಿಗೆ ಸ್ಥಾನ ಕಲ್ಪಿಸಲಾಗಿದೆ.

ಉಳಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಮಳವಳ್ಳಿ ಶಿವಣ್ಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಪಿ.ವಿ ಮೋಹನ್ ಅವರಿಗೆ ಟಿಕೆಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡನೇ ಬಾರಿ ಟಿಕೆಟ್ ನಿರೀಕ್ಷೆಯಲ್ಲಿದ್ದ ರಮೇಶ್ ಬಾಬು , ನಾಸಿರ್ ಅಹಮದ್ ಮತ್ತು ಗೋವಿಂದರಾಜು ಅವರುಗಳಿಗೆ ಟಿಕೆಟ್ ನೀಡಿಲ್ಲ. ಇದರಲ್ಲಿ ಎರಡನೇ ಅವಧಿಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಮೇಶ್ ಬಾಬು ಅವರಿಗೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷೆಯಿತ್ತು .

ಆದರೆ ಕಾಂಗ್ರೆಸ್ ನಾಲ್ವರಿಗೆ ಮಾತ್ರ ಟಿಕೆಟ್ ಘೋಷಿಸಿದೆ. ವಿಧಾನಸಭೆಯಿಂದ ಜೂನ್ 18ರಂದು ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಆಡಳಿತ ಕೂಡ ಕಾಂಗ್ರೆಸ್ ಈ ಚುನಾವಣೆಯಲ್ಲಿ ಐದು ಸ್ಥಾನವನ್ನು ಗೆಲ್ಲುವ ಸಾಮರ್ಥ್ಯ ಹೊಂದಿದ್ದರೆ, ಪ್ರತಿಪಕ್ಷ ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲಲಿದೆ. ಜೆಡಿಎಸ್ ಯಾವುದೇ ಸ್ಥಾನ ಗೆಲ್ಲುವ ಸಾಧ್ಯತೆಗಳಿಲ್ಲ.

ಇದೇ ತಿಂಗಳ 30 ರಂದು ವಿಧಾನ ಪರಿಷತ್ನ ಒಟ್ಟು ಏಳು ಸದಸ್ಯರ ಅಧಿಕಾರ ಮುಕ್ತಾಯವಾಗಲಿದೆ. ತೆರವಾಗಲಿರುವ ಈ ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗ ಅಧಿಸೂಚನೆಯನ್ನು ಹೊರಡಿಸಿದೆ.

ಕಾಂಗ್ರೆಸ್ ಸದಸ್ಯರಾದ ಗೋವಿಂದರಾಜು, ನಾಸಿರ್ ಅಹಮದ್ ,ಎಂಟಿಬಿ ನಾಗರಾಜ್, ಪ್ರತಾಪ್ ಸಿಂಹ ನಾಯಕ್, ತಿಪ್ಪಣ್ಣಪ್ಪ ಕಮಕನೂರು ಬಿಕೆ ಹರಿಪ್ರಸಾದ್, ಮತ್ತು ಸುನಿಲ್ ವಲ್ಯಾಪುರಾ ಅವರುಗಳ ಅವಧಿ ಮುಕ್ತಾಯವಾಗಲಿದೆ.

ಬಿಜೆಪಿಯಲ್ಲಿ ಟಿಕೆಟ್ ಪಡೆಯಲು ಹಲವಾರು ಶತ ಪ್ರಯತ್ನ ನಡೆಸಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗಾಗಲೇ ಕೇಂದ್ರ ನಾಯಕನ ಜೊತೆ ಮಾತುಕತೆ ನಡೆಸಿ ರಾಜ್ಯ ಘಟಕದ ವತಿಯಿಂದ ಕೆಲವು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.

ಮೂಲಗಳ ಪ್ರಕಾರ ಬಿಜೆಪಿಯು ಒಂದೆರಡು ದಿನದಲ್ಲಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಿದೆ ಎಂದು ಗೊತ್ತಾಗಿದೆ.

ಜೂನ್ 8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂನ್ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 10 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು. ಅಗತ್ಯವಿದ್ದರೆ ಜೂನ್ 18ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ 4:00 ವರೆಗೆ ಮತದಾನ ನಡೆದು ಅದೇ ದಿನ ಸಂಜೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಮೂಲಗಳ ಪ್ರಕಾರ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ನಡೆಯುವ ಸಾಧ್ಯತೆಗಳು ತೀರ ಕಡಿಮೆ ಎನ್ನಲಾಗುತ್ತದೆ. ಬಹುತೇಕ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಂಭವವೇ ಹೆಚ್ಚಾಗಿದೆ.

ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಬೇಕಾದರೆ ನಾಮಪತ್ರಕ್ಕೆ ಸೂಚಕರಾಗಿ ಶಾಸಕರು ಸಹಿ ಹಾಕಬೇಕು. ಯಾವುದೇ ಪಕ್ಷದ ಅಭ್ಯರ್ಥಿಯು ಅಧಿಕೃತ ಅಭ್ಯರ್ಥಿ ಹೊರತುಪಡಿಸಿ ಪಕ್ಷೇತರ ಅಭ್ಯರ್ಥಿಗಳಿಗೆ ಕೈ ಹಾಕಲು ಹಿಂದಿಟು ಹಾಕುತ್ತಾರೆ. ಅಲ್ಲದೆ ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರುಗಳಿಗೆ ವಿಪ್ ಜಾರಿ ಮಾಡಲಾಗುತ್ತದೆ. ಅಂದರೆ ಪ್ರತಿಯೊಬ್ಬ ಶಾಸಕರು ಪಕ್ಷವು ನಿಗದಿಪಡಿಸಿದ ಅಭ್ಯರ್ಥಿಗೆ ಮತ ಹಾಕಬೇಕು.

ಚುನಾವಣೆ ಏಜೆಂಟರಿಗೆ ತೋರಿಸಿಯೇ ಮತ ಹಾಕಬೇಕಾಗುತ್ತದೆ. ಒಂದು ವೇಳೆ ಯಾರಾದರೂ ವಿಪ್ ಉಲ್ಲಂಘಿಸಿಅಡ್ಡ ಮತದಾನ ಮಾಡಿದರೆ ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸ್ಪೀಕರ್ ಅವರಿಗೆ ದೂರು ನೀಡಲಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular