ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ನಿವೇಶನ ಹೊಂದಿದ ವಸತಿ ರಹಿತರಿಂದ ರಾಜೀವ್ ಗಾಂಧಿ ವಸತಿ ನಿಗಮದ ಸಹಯೋಗದೊಂದಿಗೆ ವಸತಿ ಯೋಜನೆಯಡಿ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ದೃಢೀಕೃತ ದಾಖಲಾತಿಗಳನ್ನು ಜೂ. 20ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಜಿಟಿಟಿಸಿ ಡಿಪ್ಲೋಮಾ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಇಲ್ಲಿನ ಮಾಚೇನಹಳ್ಳಿಯ ನಿದಿಗೆ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಸಂಸ್ಥೆಯಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಕೋರ್ಸ್‌ಗಳ ಉಳಿಕೆ ಸೀಟುಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ಲಭ್ಯವಿರುವ ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್ (ಡಿಟಿಡಿಎಂ, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (ಡಿಎಂಸಿಹೆಚ್) ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಟರಿಂಗ್ (ಡಿಪಿಎಂ) ಕೋರ್ಸ್‌ಗಳ ಪ್ರವೇಶಾತಿಗೆ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸ್‌ಗಳು 3 ವರ್ಷದ ವ್ಯಾಸಂಗ ಹಾಗೂ 1 ವರ್ಷದ ಕಡ್ಡಾಯ ಕೈಗಾರಿಕಾ ತರಬೇತಿಯನ್ನು ಒಳಗೊಂಡಿರುತ್ತವೆ.
ಉಳಿಕೆ ಸೀಟುಗಳನ್ನು “ಮೊದಲು ಬಂದವರಿಗೆ ಮೊದಲ ಆದ್ಯತೆ” ಮೇರೆಗೆ ಹಂಚಿಕೆ ಮಾಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9448307027, 9880141054, 9449286543 ಅಥವಾ ದೂರವಾಣಿ ಸಂಖ್ಯೆ 08182-246054 ಅನ್ನು ಸಂಪರ್ಕಿಸಬಹುದು ಎಂದು ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

