HomeLatest Newsಸಾರ್ವಜನಿಕರೇ ಗಮನಿಸಿ ; ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಸಾರ್ವಜನಿಕರೇ ಗಮನಿಸಿ ; ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜುಲೈ 2026ರ ಮಾಹೆಯಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ನಾಗರಿಕರು ಅರ್ಜಿ ನಮೂನೆಯನ್ನು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಸಾಗರ ರಸ್ತೆ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ 2 ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಸಲ್ಲಿಸುವಮತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.

ಈ ರಿಯಾಯಿತಿಯು ನಿರ್ದಿಷ್ಟ ಅವಧಿಯ ಪ್ರಕರಣಗಳಿಗೆ ಮಾತ್ರ ಅನ್ವಯಿಸಲಿದೆ.1991 ರಿಂದ 2022 ರ ಒಳಗಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳಿಗೆ ಮಾತ್ರ ಈ 50% ದಂಡ ಪಾವತಿ ರಿಯಾಯಿತಿ ಅನ್ವಯವಾಗುತ್ತದೆ.

ಶಿವಮೊಗ್ಗ ಜಿಲ್ಲೆಯ ಬಾಕಿ ಪ್ರಕರಣಗಳು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದ್ಯ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ.

ದಂಡ ಪಾವತಿಯ ಅವಧಿ: ಅರ್ಹ ವಾಹನ ಮಾಲೀಕರು ದಿನಾಂಕ: 21-06-2026 ರಿಂದ 10-07-2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ.ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸಬೇಕಾಗಿ ಅವರು ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular